ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಂಟ್ವಾಳದಲ್ಲಿ ಸರ್ಕಾರಿ ಆಸ್ಪತ್ರೆ ಸಿಬ್ಬಂದಿಗೆ ಗೌರವ ಸಲ್ಲಿಸಿದ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ಕೊರೊನಾ ಲಸಿಕೆ ನೀಡುವುದರಲ್ಲಿ ಭಾರತವು ಮೈಲುಗಲ್ಲು ಸಾಧಿಸಿದೆ. ಈ ಸಾಧನೆಗೆ ಕಾರಣವಾದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೃತಜ್ಞತೆ ಸಲ್ಲಿಸಬೇಕಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದ್ದಾರೆ.

ದೇಶದಲ್ಲಿ ಕೋವಿಡ್ ಲಸಿಕೆ 100 ಕೋಟಿ ದಾಟಿದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಅವರು ಶುಕ್ರವಾರ ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ತಾಲೂಕು ವೈದ್ಯಾಧಿಕಾರಿಗಳು ಸೇರಿದಂತೆ ಆಸ್ಪತ್ರೆಯ ವೈದ್ಯರು, ದಾದಿಯರು ಹಾಗೂ ಸಿಬ್ಬಂದಿಯನ್ನು ಗೌರವಿಸಿ ಮಾತನಾಡಿದರು.

ಬಂಟ್ವಾಳದಲ್ಲಿ ಈಗಾಗಲೇ 3.60 ಲಕ್ಷ ಮಂದಿ ಲಸಿಕೆ ಪಡೆದಿದ್ದು, 2.48 ಲಕ್ಷ ಮೊದಲ ಡೋಸ್ ಹಾಗೂ 1.21 ಲಕ್ಷ 2ನೇ ಡೋಸ್ ಪಡೆದಿದ್ದಾರೆ. 60 ವರ್ಷ ದಾಟಿದವರು 42 ಸಾವಿರ ಮಂದಿ, 40 ವರ್ಷ ದಾಟಿದವರು 74 ಸಾವಿರ ಮಂದಿ 18 ವರ್ಷ ದಾಟಿದವರು 1 ಲಕ್ಷಕ್ಕೂ ಅಧಿಕ ಮಂದಿ ಲಸಿಕೆ ಪಡೆದಿದ್ದಾರೆ. 25 ಸಾವಿರದಷ್ಟು ಲಸಿಕೆ ನಮ್ಮಲ್ಲಿ ಸ್ಟಾಕ್ ಇದೆ ಎಂದು ವಿವರಿಸಿದರು.

ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಾ ಪ್ರಭು, ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಪುಷ್ಪಲತಾ, ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಬೂಡಾ ಅಧ್ಯಕ್ಷ ಬಿ.ದೇವದಾಸ್ ಶೆಟ್ಟಿ, ಪುರಸಭಾ ಸದಸ್ಯ ಹರಿಪ್ರಸಾದ್ ಭಂಡಾರಿಬೆಟ್ಟು, ಬಿಜೆಪಿ ಕ್ಷೇತ್ರ ಪ್ರಧಾನ ಕಾರ್ಯದರ್ಶಿ ರವೀಶ್ ಶೆಟ್ಟಿ ಕರ್ಕಳ, ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯ ವಿಶ್ವನಾಥ್ ಚಂಡ್ತಿಮಾರ್ ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

22/10/2021 02:45 pm

Cinque Terre

4.07 K

Cinque Terre

0