ಬಂಟ್ವಾಳ: 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವ ಪ್ರಯುಕ್ತ 75 ಕೋಟಿ ಸೂರ್ಯನಮಸ್ಕಾರ ನಿಮಿತ್ತ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಸೋಮವಾರ 3200 ವಿದ್ಯಾರ್ಥಿಗಳು ಸಾಮೂಹಿಕ ಸೂರ್ಯನಮಸ್ಕಾರದಲ್ಲಿ ಪಾಲ್ಗೊಂಡರು. ಸೂರ್ಯನ ಆಕಾರದಲ್ಲೇ ಸೇರಿದ ವಿದ್ಯಾರ್ಥಿಗಳು ಮಂತ್ರಸಹಿತ ನಮಸ್ಕಾರ ಮಾಡಿದರು. ಪ್ರಗತಿಪರ ಕೃಷಿಕರಾದ ಲಕ್ಷ್ಮೀನಾರಾಯಣ ಪರಾಡ್ಕರ್ ಧ್ವಜಾರೋಹಣಗೈದರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾಕೇಂದ್ರದ ಸಂಚಾಲಕ ವಸಂತ ಮಾಧವ, ಡಾ. ಕಮಲಾ ಪ್ರ.ಭಟ್, ಆಡಳಿತ ಮಂಡಳಿ ಸದಸ್ಯರು, ವಿಭಾಗ ಪ್ರಮುಖರು, ಶಿಕ್ಷಕರು, ಶಿಕ್ಷಕೇತರರು ಉಪಸ್ಥಿತರಿದ್ದರು.
PublicNext
07/02/2022 09:08 pm