ಉಡುಪಿ: ಜಿಲ್ಲಾ ವಕೀಲರ ಸಂಘ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿ ಬೂಸ್ಟರ್ ಡೋಸ್ ಶಿಬಿರ ಇಂದು ನಡೆಯಿತು.
ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶಾಂತವೀರ ಶಿವಪ್ಪ ಶಿಬಿರವನ್ನು ಉದ್ಘಾಟಿಸಿದರು. ಶಿಬಿರದಲ್ಲಿ ವಿಶೇಷ ಸರ್ಕಾರಿ ಅಭಿಯೋಜಕರಾದ ವಿಜಯ್ ಕುಮಾರ್ ಶೆಟ್ಟಿ ಅವರು ಮೊದಲ ಲಸಿಕೆಯನ್ನು ಪಡೆದರು.
ವಕೀಲರ ಸಂಘದ ಅಧ್ಯಕ್ಷರಾದ ಡಿ ನಾಗರಾಜ್, ಉಪಾಧ್ಯಕ್ಷರಾದ ದಿವಾಕರ್ ಡಿ ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ರೊನಾಲ್ಡ್ ಪ್ರವೀಣ್ ಕುಮಾರ್ , ವೈದ್ಯಾಧಿಕಾರಿಗಳಾದ ಸಾತ್ವಿಕ್ ಹಾಗೂ ಸಿಬ್ಬಂದಿ, ಸರ್ಕಾರಿ ಅಭಿಯೋಜಕರುಗಳು ಮತ್ತು ವಕೀಲರ ಸಂಘದ ಸದಸ್ಯರುಗಳು ಭಾಗವಹಿಸಿದ್ದರು.
Kshetra Samachara
21/07/2022 06:26 pm