ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಇಂದಿನಿಂದ ಮಂಗಳೂರು ವಿವಿ ಪದವಿ, ಸ್ನಾತಕೋತ್ತರ ಪದವಿ ಪರೀಕ್ಷೆ ಆರಂಭ: ಕೇರಳದ ವಿದ್ಯಾರ್ಥಿಗಳಿಗೆ ವಿಶೇಷ ಪರೀಕ್ಷೆ

ಮಂಗಳೂರು: ಕೋವಿಡ್ ಸೋಂಕು ಭೀತಿಯ ಪರಿಣಾಮ ಮುಂದೂಡಲಾಗಿದ್ದ ಮಂಗಳೂರು ವಿವಿಯ ಪದವಿ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆ ಇಂದಿನಿಂದ ಆರಂಭವಾಗಿದ್ದು, ಆಗಸ್ಟ್ 17ರ ವರೆಗೆ ನಡೆಯಲಿದೆ. ಕೊರೊನಾ ಸೋಂಕು ನಿಯಮ ಪಾಲನೆ ಮಾಡಿ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ವಿವಿ ಪರೀಕ್ಷೆ ನಡೆಸುತ್ತಿದೆ.

ಆದರೆ ಕೇರಳ ರಾಜ್ಯದಲ್ಲಿ ಕೋವಿಡ್ ಸೋಂಕು ಹೆಚ್ಚಳಗೊಂಡ ಹಿನ್ನೆಲೆಯಲ್ಲಿ ಕೇರಳ-ಮಂಗಳೂರು ನಡುವೆ ಬಸ್ ಸಂಚಾರವನ್ನು ದ.ಕ.ಜಿಲ್ಲಾಡಳಿತ ವಾರಗಳ ಕಾಲ ಸ್ಥಗಿತಗೊಳಿಸಿದೆ. ಈ ಹಿನ್ನೆಲೆಯಲ್ಲಿ ಕಾಸರಗೋಡು ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ತೊಂದರೆಯಾಗಿದೆ. ಸ್ವಂತ ವಾಹನಗಳಲ್ಲಿ ಬರುವ ವಿದ್ಯಾರ್ಥಿಗಳಿಗೆ ಗಡಿ ಭಾಗದ ಚೆಕ್ ಪೋಸ್ಟ್ ನಲ್ಲಿ ಪರೀಕ್ಷಾ ಪ್ರವೇಶ ಪತ್ರಿಕೆ ತೋರಿಸಿದಲ್ಲಿ ಜಿಲ್ಲೆಯ ಗಡಿ ಪ್ರವೇಶಕ್ಕೆ ಅನುಮತಿ ದೊರೆಯಲಿದೆ ಎಂದು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಆದರೆ ಬಸ್ ನಲ್ಲಿ ಬರುವ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲು ಆಗದಿದ್ದಲ್ಲಿ ಅವರಿಗೆ ಮುಂದಿನ ದಿನಗಳಲ್ಲಿ ವಿಶೇಷ ಪರೀಕ್ಷೆ ನಡೆಸಲಾಗುತ್ತದೆ ಎಂದು ವಿವಿ ತಿಳಿಸಿದೆ.

Edited By : Manjunath H D
Kshetra Samachara

Kshetra Samachara

02/08/2021 10:54 am

Cinque Terre

26.45 K

Cinque Terre

0

ಸಂಬಂಧಿತ ಸುದ್ದಿ