ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿಯ ಶಾಲೆಗಳಿಗೆ ವಕ್ಕರಿಸಿದ ಕೊರೊನಾ: 1,293 ಮಕ್ಕಳಿಗೆ ಸೋಂಕು ದೃಢ

ಉಡುಪಿ: ರಾಜ್ಯದಲ್ಲಿ ಕೊರೊನಾ ಅಬ್ಬರ ಜೋರಾಗಿದೆ. ದಾಖಲೆಯ ಪ್ರಮಾಣದಲ್ಲಿ ಸೋಂಕಿತರ ಸಂಖ್ಯೆ ಕಾಣಿಸಿಕೊಳ್ಳುತ್ತಿದ್ದು, ಆತಂಕ ಹೆಚ್ಚಿಸಿದೆ.

ಉಡುಪಿ ಜಿಲ್ಲೆಯಲ್ಲಿ ಕೊಂಚ ತತ್ತಗಾಗಿದ್ದ ಕೋವಿಡ್ ಮತ್ತೆ ದಾಖಲೆಯ ಪ್ರಮಾಣದಲ್ಲಿ ಏರಿಕೆ ಕಾಣುತ್ತಿದೆ. ಇನ್ನು ಜಿಲ್ಲೆಯ ಶಾಲೆಗಳಲ್ಲಿ ಕೊರೊನಾ ಸೋಂಕು ಸ್ಫೋಟವಾಗಿದೆ. ಜನವರಿ ಆರಂಭದಿಂದ ಇಲ್ಲಿಯವರೆಗೂ 1,293 ಮಕ್ಕಳಿಗೆ ಕೊರೊನಾ ತಗುಲಿದ್ದು, ಈಗ ಆತಂಕಕ್ಕೆ ಎಡೆ ಮಾಡಿದೆ.

ಶಾಲೆಗಳಲ್ಲಿ ಕೊರೋನಾ ಹಬ್ಬುತ್ತಿದ್ದರೂ ಶಾಲೆಗಳನ್ನು ಮಾತ್ರ ಬಂದ್ ಮಾಡಿಲ್ಲ. ಶುಕ್ರವಾರದಂದು 139 ವಿದ್ಯಾರ್ಥಿಗಳಿಗೆ ಸೋಂಕು ತಗುಲಿತ್ತು. ಇನ್ನು ನಿನ್ನೆ (ಶನಿವಾರ) ಜಿಲ್ಲೆಯಲ್ಲಿ 607 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 63 ಮಂದಿ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದರು.

ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 80,502ಕ್ಕೆ ಏರಿಕೆಯಾಗಿದೆ. ಒಟ್ಟು ಡಿಸ್ಚಾರ್ಚ್ ಆದವರ ಸಂಖ್ಯೆ 77,132 ಆಗಿದೆ. ಈವರೆಗೂ ಒಟ್ಟು 491 ಜನರು ಕೊರೊನಾಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ 2,879 ಸಕ್ರಿಯ ಪ್ರಕರಣಗಳಿವೆ. ಸದ್ಯದ ಕೊರೊನಾ ಪಾಸಿಟಿವಿಟಿ ದರವು ಶೇ 7.40 ಇದೆ.

Edited By : Vijay Kumar
Kshetra Samachara

Kshetra Samachara

16/01/2022 07:43 am

Cinque Terre

15.28 K

Cinque Terre

1

ಸಂಬಂಧಿತ ಸುದ್ದಿ