ಮಂಗಳೂರು: ಕೊರೊನಾ ಆತಂಕದ ಹಿನ್ನೆಲೆಯಲ್ಲಿ ಮಂಗಳೂರು ವಿಶ್ವ ವಿದ್ಯಾಲಯದ ಪದವಿ ಪರೀಕ್ಷೆಗಳನ್ನು ಮತ್ತೆ ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ.
ಕಳೆದ ಏಪ್ರಿಲ್‌ನಲ್ಲಿ ಪ್ರಾರಂಭಗೊಂಡಿದ್ದ ಪದವಿ ಪರೀಕ್ಷೆಗಳನ್ನು ಕೋವಿಡ್ ಲಾಕ್‌ಡೌನ್ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು. ಅವುಗಳನ್ನು ಆಗಸ್ಟ್ ಮೊದಲ ವಾರ ನಡೆಸಲು ತೀರ್ಮಾನಿಸಲಾಗಿದ್ದು, ಮೊದಲ ದಿನವಾದ ಸೋಮವಾರ ಮೊದಲ ಪರೀಕ್ಷೆ ನಡೆದಿತ್ತು. 1, 3, 5 ಹಾಗೂ 7ನೇ ಪದವಿ ಸೆಮಿಸ್ಟರ್ ಪರೀಕ್ಷೆಗಳನ್ನು ಆಗಸ್ಟ್ 2ರಿಂದ ಹಾಗೂ 1, 3ನೇ ಸೆಮಿಸ್ಟರ್ ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಆ.5ರಿಂದ ನಡೆಸಲು ನಿರ್ಧರಿಸಲಾಗಿತ್ತು.
ಆದರೆ ಮಂಗಳೂರು ವಿಶ್ವವಿದ್ಯಾಲಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯಿಂದ ಬರುತ್ತಾರೆ. ಆದರೆ ಕೊರೊನಾ ಆತಂಕದ ಹಿನ್ನೆಲೆಯಲ್ಲಿ ಗಡಿಭಾಗಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಬೇಕೆಂದು ಸರ್ಕಾರ ನಿರ್ದೇಶನ ನೀಡಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮಂಗಳೂರು ವಿಶ್ವವಿದ್ಯಾಲಯ ಆಡಳಿತಕ್ಕೆ ನಿರ್ದೇಶನ ನೀಡಿದ್ದಾರೆ. ಅದರಂತೆ ಪರೀಕ್ಷೆಗಳನ್ನು ಮುಂದೂಡಿ ಕ್ರಮ ಕೈಗೊಳ್ಳಲಾಗಿದೆ.
Kshetra Samachara
03/08/2021 09:45 pm