ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ನಾಗರಿಕರಿಗೆ ಮಾರಕವಾಗಿರುವ ಅಣಬೆ ಫ್ಯಾಕ್ಟರಿ ಬಂದ್‌ಗೆ ಆಗ್ರಹಿಸಿ ಪ್ರತಿಭಟನೆ

ಮಂಗಳೂರು: ನಾಗರಿಕರ ಆರೋಗ್ಯಕ್ಕೆ ಮಾರಕವಾಗಿರುವ ವಾಮಂಜೂರಿನ ಆಶ್ರಯನಗರದಲ್ಲಿನ ವೈಟ್ ಗ್ರೋ ಅಣಬೆ ಫ್ಯಾಕ್ಟರಿ ವಿರುದ್ಧ ಹೇಳಿಕೆ ನೀಡಿದವರ ವಿರುದ್ಧ ಮಾಲೀಕ, ಮಾಜಿ ಶಾಸಕ ಜೆ.ಆರ್.ಲೋಬೊ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಪೊಲೀಸ್ ನೋಟಿಸ್ ಜಾರಿಗೊಳಿಸುವಂತೆ ಮಾಡುತ್ತಾರೆ. ನಮಗೆ ಇಲ್ಲಿ ಬದುಕಲು ಸಾಧ್ಯವಿಲ್ಲ. ಅಂತಹ ಕೆಟ್ಟ ವಾಸನೆ ಬರುತ್ತದೆ. ಈ ಫ್ಯಾಕ್ಟರಿಯನ್ನು ತಕ್ಷಣ ಬಂದ್ ಮಾಡಿಸಿ ಎಂದು ನಾಗರಿಕರು ಪ್ರತಿಭಟನೆ ಮಾಡಿ ಅಳಲು ತೋಡಿಕೊಂಡರು.

ಈ ಬಗ್ಗೆ ಸರ್ಕಾರಕ್ಕೆ ಸಾಕಷ್ಟು ಬಾರಿ ಮನವಿ ಸಲ್ಲಿಸಿದರೂ, ಪರಿಹಾರ ಮಾತ್ರ ಶೂನ್ಯವಾಗಿದೆ ಎಂದು ಆಶ್ರಯ ನಗರ ನಿವಾಸಿಗಳು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಫ್ಯಾಕ್ಟರಿಯಿಂದ ಬರುತ್ತಿರುವ ದುರ್ನಾತದಿಂದ ತಮ್ಮ ಮೊಮ್ಮಗ ಅನಾರೋಗ್ಯಕ್ಕೊಳಗಾಗಿದ್ದಾನೆ. ಈ ಬಗ್ಗೆ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದೇನೆ ಎಂದು ಪೊಲೀಸ್ ದೂರು ದಾಖಲಿಸಿದ್ದಾರೆ. ಅಲ್ಲದೆ ಮತ್ತೆ ಮೂವರ ಮೇಲೆ ಜೆ ಆರ್ ಲೋಬೋ ತಮ್ಮ ಪ್ರಭಾವ ಬಳಸಿ ಸೆನ್ ಪೊಲೀಸ್ ಠಾಣೆಯಿಂದ ನೋಟಿಸ್ ನೀಡುವಂತೆ ಮಾಡಿದ್ದಾರೆ ಎಂದು ಪ್ರತಿಭಟನೆ ನಡೆಸುತ್ತಿರುವ ಮಹಿಳೆ ಕಾರ್ಮೆಲ್ ಲೋಬೊ ಹೇಳಿದರು

ಆಶ್ರಯ ನಗರ ನಿವಾಸಿಗಳ ಹೋರಾಟಕ್ಕೆ ಮಂಗಳೂರು ಉತ್ತರ ಶಾಸಕ ಡಾ.ವೈ.ಭರತ್ ಶೆಟ್ಟಿ ಕೂಡ ಬೆಂಬಲ ನೀಡಿದ್ದು, ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ. ಈ ಸಮಸ್ಯೆಗೆ ಪರಿಹಾರ ಸಿಗುವವರೆಗೂ ಜನರೊಂದಿಗೆ ಇರುತ್ತೇನೆ ಎಂದು ಆಶ್ವಾಸನೆ ನೀಡಿದರು.

ರಾಜ್ಯದಲ್ಲಿರುವುದು ತಮ್ಮ ಸರ್ಕಾರ ಎಂದು ಲೋಬೊ ಅವರು ನಡೆದುಕೊಳ್ಳುತ್ತಿದ್ದಾರೆ. ಆದರೆ ಇನ್ನು ಮುಂದೆಯೂ ತಮ್ಮ ಸಮಸ್ಯೆಗೆ ಪರಿಹಾರ ದೊರಕದಿದ್ದಲ್ಲಿ ದೊಡ್ಡ ಮಟ್ಟದ ಹೋರಾಟ ನಡೆಸಿ, ಹೈವೆ ಬಂದ್ ಮಾಡುವ ಬಗ್ಗೆ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.

Edited By : Ashok M
PublicNext

PublicNext

12/11/2023 08:09 pm

Cinque Terre

24.79 K

Cinque Terre

0

ಸಂಬಂಧಿತ ಸುದ್ದಿ