ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ನೈಟ್ ಕರ್ಫ್ಯೂ ಜಾರಿ ಮಾಡಿ ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶ ಹೊರಡಿಸಿದ್ದಾರೆ.
ಉಡುಪಿಯಲ್ಲಿ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5:00 ಗಂಟೆವರೆಗೆ ನೈಟ್ ಕರ್ಫ್ಯೂ (ಸೆಕ್ಷನ್ 144 (3) ಜಾರಿ ಮಾಡಲಾಗಿದ್ದು, ಪಬ್‌ಗಳಿಗೆ ಇನ್ನು ಅವಕಾಶ ಇರುವುದಿಲ್ಲ. ಈಜುಕೊಳದಲ್ಲಿ ತರಬೇತಿಗೆ ಮಾತ್ರ ಅವಕಾಶವಿದ್ದು, ಸಾರ್ವಜನಿಕರಿಗೆ ಪ್ರವೇಶ ಇಲ್ಲ. ಮೈದಾನ, ಕ್ರೀಡಾಂಗಣದಲ್ಲಿ ಕ್ರೀಡಾಪಟುಗಳ ಅಭ್ಯಾಸಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಯಾವುದೇ ರಾಜಕೀಯ, ಸಾರ್ವಜನಿಕ ಸಭೆ-ಸಮಾರಂಭಗಳಿಗೆ ಅವಕಾಶ ಇರುವುದಿಲ್ಲ. ಕೌಟುಂಬಿಕ ಕಾರ್ಯಕ್ರಮಗಳಿಗೆ ಕೇವಲ 100 ಜನಕ್ಕೆ ಮಾತ್ರ ಅವಕಾಶವಿದೆ.
ದೇವಸ್ಥಾನದಲ್ಲಿ ಜಾತ್ರೆ, ಉತ್ಸವ ಮೆರವಣಿಗೆಗೆ ಅವಕಾಶ ಇಲ್ಲ. ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲಿ ನಿಂತು ಪ್ರಯಾಣಿಸಿದರೆ ದಂಡ ವಿಧಿಸಿ ಆದೇಶ ಹೊರಡಿಸಲಾಗಿದೆ. ಚಿತ್ರಮಂದಿರಗಳಲ್ಲಿ ಶೇಕಡಾ 50 ವೀಕ್ಷಕರಿಗೆ ಅವಕಾಶ ಕಲ್ಪಿಸಿ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿದ್ದಾರೆ.
Kshetra Samachara
04/08/2021 09:39 pm