ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತೆಯ ದೃಷ್ಟಿಯಿಂದ ಆ.30ವರೆಗೆ ರಾತ್ರಿ ಕರ್ಫ್ಯೂ ಮತ್ತು ವಾರಾಂತ್ಯ ಕರ್ಫ್ಯೂ ವಿಸ್ತರಣೆ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.
ಅದಾಗಲೇ ಇರುವ ರಾತ್ರಿ ಹಾಗೂ ವಾರಾಂತ್ಯ ಕರ್ಫ್ಯೂ ಆದೇಶ ಸೋಮವಾರಕ್ಕೆ ಕೊನೆಗೊಂಡಿತ್ತು. ಈ ಆದೇಶವನ್ನು ಆಗಸ್ಟ್ 30ರವರೆಗೆ ವಿಸ್ತರಣೆ ಮಾಡಿ ನೂತನ ಆದೇಶವನ್ನು ಹೊರಡಿಸಿದ್ದಾರೆ.
ಅಲ್ಲದೆ ಜಿಲ್ಲೆಯಲ್ಲಿರುವ ಎಲ್ಲಾ ಪಬ್ ಮತ್ತು ಬಾರ್ ಆ್ಯಂಡ್ ರೆಸ್ಟೋರೆಂಟ್ಗಳನ್ನು ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 7 ಗಂಟೆಯೊಳಗೆ ಮುಚ್ಚಲು ಆದೇಶಿಸಲಾಗಿದೆ. ರಾತ್ರಿ 9ರಿಂದ ಬೆಳಗ್ಗೆ 6 ಗಂಟೆಯವರೆಗೆ ರಾತ್ರಿ ಕರ್ಫ್ಯೂ ಇದ್ದು, ಆಗಸ್ಟ್ 30ವರೆಗೆ ವಾರಾಂತ್ಯ ಕರ್ಫ್ಯೂ ಮುಂದುವರಿಯಲಿದೆ ಎಂದು ಜಿಲ್ಲಾಧಿಕಾರಿಯವರು ಆದೇಶಿಸಿದ್ದಾರೆ.
Kshetra Samachara
17/08/2021 11:12 pm