ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿಯಲ್ಲಿ ಕೊರೋನಾ ನಿಯಂತ್ರಣಕ್ಕೆ ಕಟ್ಟು ನಿಟ್ಟಿನ ಕ್ರಮ: ನೈಟ್ ಕರ್ಪ್ಯೂ,ವೀಕೆಂಡ್ ಕರ್ಪ್ಯೂ!

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಕೊರೋನಾ ನಿಯಂತ್ರಣಕ್ಕೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು ನೈಟ್ ಕರ್ಪ್ಯೂ ಜೊತೆಗೆ ವೀಕೆಂಡ್ ಕರ್ಪ್ಯೂ ಜಾರಿಗೊಳಿಸಲಾಗಿದೆ.ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ.ಜಿಲ್ಲೆಯಲ್ಲಿ ಶನಿವಾರ, ಭಾನುವಾರ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದ್ದು,ರಾಜಕೀಯ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ನಿರ್ಬಂಧ ವಿಧಿಸಲಾಗಿದೆ.

ಮದುವೆ ಇನ್ನಿತರ ಶುಭ ಕಾರ್ಯಗಳಿಗೆ 400 ಜನರಿಗೆ ಮಾತ್ರ ಭಾಗವಹಿಸಲು ಅವಕಾಶ ಇದೆ.

ಧಾರ್ಮಿಕ ಕ್ಷೇತ್ರದಲ್ಲಿ ಉತ್ಸವ, ಮೆರವಣಿಗೆಗಳಿಗೆ ಅವಕಾಶ ಇಲ್ಲ ಎಂದುಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಆದೇಶ ಹೊರಡಿಸಿದ್ದಾರೆ.

ಸೆಪ್ಟೆಂಬರ್ 13 ರವರೆಗೂ ಜಿಲ್ಲೆಯಲ್ಲಿ ಈ ಆದೇಶ ಜಾರಿಯಲ್ಲಿರಲಿದೆ.

Edited By : Nirmala Aralikatti
Kshetra Samachara

Kshetra Samachara

02/09/2021 05:32 pm

Cinque Terre

24.98 K

Cinque Terre

7

ಸಂಬಂಧಿತ ಸುದ್ದಿ