ಉಡುಪಿ : ಉಡುಪಿ ಜಿಲ್ಲೆಯಲ್ಲಿ ಕೊರೋನಾ ಪ್ರಕರಣಗಳನ್ನು ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಕೇರಳದಿಂದ ಜಿಲ್ಲೆಗೆ ಬರುವವರು ಕಡ್ಡಾಯವಾಗಿ 72 ತಾಸಿನ ಒಳಗಿನ ಕೋವಿಡ್ ನೆಗೆಟಿವ್ ವರದಿಯನ್ನು ತರಬೇಕು ಎಂದು ಉಡುಪಿ ಡಿಸಿ ಕೂರ್ಮಾ ರಾವ್ ಹೇಳಿದ್ದಾರೆ. ನೆಗೆಟಿವ್ ವರದಿ ತಂದ ಬಳಿಕವೂ ಇಲ್ಲಿ ಒಂದು ವಾರ ಕಡ್ಡಾಯವಾಗಿ ಸಾಂಸ್ಥಿಕ ಕ್ವಾರಂಟೈನ್ ಗೆ ಒಳಪಡಬೇಕು ಎಂದು ಆದೇಶ ಮಾಡಿದ್ದಾರೆ.
ಜಿಲ್ಲೆಗೆ ಸಾಕಷ್ಟು ಪ್ರವಾಸಿಗರು ಮತ್ತು ವಿದ್ಯಾರ್ಥಿಗಳು ಬರುತ್ತಿದ್ದು ಈ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಒಂದು ವಾರದ ಸಾಂಸ್ಥಿಕ ಕ್ವಾರಂಟೈನ್ ಬಳಿಕ ಪಾಸಿಟಿವ್ ವರದಿ ಬಂದ ನಂತರವೇ ಎಲ್ಲರಂತೆ ಓಡಾಬಹುದು ಎಂದು ಡಿಸಿ ಹೇಳಿದ್ದಾರೆ.
Kshetra Samachara
03/09/2021 02:31 pm