ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ನಿಫಾ ವೈರಸ್ ಬಗ್ಗೆ ಆತಂಕ ಬೇಡ ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ

ಉಡುಪಿ: ನಿಫಾ ವೈರಸ್ ಬಗ್ಗೆ ಜನರು ಆತಂಕಗೊಳ್ಳದೆ ಆರೋಗ್ಯ ಇಲಾಖೆ ಸೂಚಿಸುವ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್. ಎಂ ಹೇಳಿದ್ದಾರೆ. ಅವರು ತಮ್ಮ ಕಛೇರಿ ಸಭಾಂಗಣದಲ್ಲಿ ನಿಫಾ ವೈರಸ್ ನಿಯಂತ್ರಣ ಹಾಗೂ ಜಿಲ್ಲಾ ಮಟ್ಟದ ಕೋವಿಡ್ ನಿಯಂತ್ರಣ ತಜ್ಞರ ಸಮಿತಿ ಸಭೆಯ

ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ನೆರೆ ರಾಜ್ಯ ಕೇರಳದಲ್ಲಿ ನಿಫಾ ವೈರಸ್ ಸೋಂಕು ಕಂಡು ಬಂದಿದ್ದು, ಅಲ್ಲಿನ ಜನರು ನಾನಾ ಕಾರಣಗಳಿಂದ ಜಿಲ್ಲೆಗೆ ಬಂದು ಹೋಗುತ್ತಾರೆ.ಸರ್ಕಾರ ಕೇರಳ ರಾಜ್ಯದಿಂದ ಜನರು ಬರುವುದನ್ನು ಹಾಗೂ ಹೋಗುವುದನ್ನು ನಿರ್ಬಂದಿಸಿದೆ, ಆದರೂ ಸಹ ಎಚ್ಚರಿಕೆ ವಹಿಸುವುದು ಅಗತ್ಯ ಎಂದರು.

ಜ್ವರ, ಕೀಲುನೋವು, ದೇಹದ ಆಯಾಸ, ತಲೆನೋವು, ತಲೆ ಸುತ್ತುವಿಕೆ, ಮಾನಸಿಕ ಗೊಂದಲ, ಜ್ಞಾನ ತಪ್ಪುವುದು, ನಿಫಾ ವೈರಾಣು ಜ್ವರದ ಲಕ್ಷಣಗಳಾಗಿವೆ. ಸಾಮಾನ್ಯವಾಗಿ ಸೋಂಕಿತ ಬಾವಲಿಗಳ ನೇರ ಸಂಪರ್ಕದಿಂದ ಅಥಾವ ಬಾವಲಿಗಳು ಸೇವಿಸಿ ಬಿಸಾಡಿದ ಹಣ್ಣು-ಹಂಪಲುಗಳನ್ನು ಸೇವಿಸುವುದರಿಂದ ಇತರೆ ಪ್ರಾಣಿಗಳಿಗೂ ಹರಡುವ ಸಾದ್ಯತೆ ಇದೆ.ಸಾರ್ವಜನಿಕರಿಗೆ ನಿಫಾ ಸೋಂಕಿನ ಹರಡುವಿಕೆ ಮತ್ತು ನಿಯಂತ್ರಣದ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

Edited By : Nagaraj Tulugeri
Kshetra Samachara

Kshetra Samachara

10/09/2021 05:06 pm

Cinque Terre

13.35 K

Cinque Terre

0

ಸಂಬಂಧಿತ ಸುದ್ದಿ