ಮಂಗಳೂರು: ರೂಪಾಂತರಿತ ಕೊರೊನಾ ವೈರಸ್ 'ಒಮಿಕ್ರಾನ್' ವಿದೇಶದಲ್ಲಿ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಕೇರಳದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರವೇಶ ಪಡೆಯಲು ಆರ್‌ಟಿಪಿಸಿಆರ್ ನೆಗೆಟಿವ್ ಪ್ರಮಾಣ ಪತ್ರ ಹೊಂದುವುದು ಕಡ್ಡಾಯಗೊಳಿಸಲಾಗಿದೆ.
ಈ ಕುರಿತು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಪ್ರತಿಕ್ರಿಯಿಸಿದ್ದು, ಕೇರಳದಿಂದ ದ.ಕ. ಪ್ರವೇಶದ ಗಡಿಯಲ್ಲಿ ದಿನದ 24 ಗಂಟೆಯೂ ಕಟ್ಟುನಿಟ್ಟಿನ ನಿಗಾ ವಹಿಸುವಂತೆ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ.ಕೇರಳ ಗಡಿಯಿಂದ ವೈರಸ್ ಹೆಚ್ಚಳ ಭೀತಿ ಹಿನ್ನೆಲೆಯಲ್ಲಿ
ದ.ಕ. ಜಿಲ್ಲಾಧಿಕಾರಿಗಳ ಜೊತೆಗೆ ಸಿಎಂ ಸಭೆ ಬಳಿಕ ಮತ್ತೆ ತಪಾಸಣೆ ಚುರುಕುಗೊಳಿಸಲಾಗಿದೆ.
ಕೇರಳ-ಕರ್ನಾಟಕ ಗಡಿಭಾಗ ತಲಪಾಡಿಯಲ್ಲಿ ತಪಾಸಣೆ ನಡೆಸಲಾಗುತ್ತಿದೆ.ಕೇರಳ ಕಡೆಯಿಂದ ಮಂಗಳೂರು ಕಡೆಗೆ ಬರುವವರಿಗೆ ತಲಪಾಡಿ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ಆರ್.ಟಿ.ಪಿ.ಸಿ.ಆರ್. ನೆಗೆಟಿವ್ ರಿಪೋರ್ಟ್ ಇದ್ರೆ ಮಾತ್ರ ಪ್ರವೇಶ ನೀಡಲಾಗುತ್ತಿದೆ.
Kshetra Samachara
28/11/2021 11:48 am