ಉಡುಪಿ: ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್, ಮಣಿಪಾಲದ ಟೈಗರ್ ಸರ್ಕಲ್ , ಬಸ್ ನಿಲ್ದಾಣ, ರಸ್ತೆ ಬದಿಯ ಅಂಗಡಿ ಮುಂಗಟ್ಟು ಸೇರಿದಂತೆ ಮಾಲ್ ಗಳಿಗೆ ಭೇಟಿ ನೀಡಿ , ಅಲ್ಲಿನ ವ್ಯಾಪಾರಿಗಳಿಗೆ ಕೋವಿಡ್ ಮಾರ್ಗಸೂಚಿಗಳನ್ನು ಚಾಚೂ ತಪ್ಪದೇ ಪಾಲಿಸಬೇಕು ಎಂದು ಎಚ್ಚರಿಕೆ ನೀಡಿದರು. ಜೊತೆಗೆ , ಮಾಸ್ಕ್ ಧರಿಸದೇ ವ್ಯಾಪಾರ ವಹಿವಾಟು ಮಾಡುವವರಿಗೆ ದಂಢ ವಿಧಿಸಲು ನಗರಸಭೆ ಸಿಬ್ಬಂದಿ ವರ್ಗದವರಿಗೆ ಸೂಚನೆ ನೀಡಿದರು.
ಅಂಗಡಿ ಮಾಲೀಕರು ತಮ್ಮ ಅಂಗಡಿ ಮುಂಭಾಗ ಗ್ರಾಹಕರು ಸಾಮಾಜಿಕ ಅಂತರ ಕಾಯ್ದಕೊಳ್ಳುವಂತೆ ಸೂಕ್ತ ಮಾರ್ಕಿಂಗ್ ಮಾಡುವುದರೊಂದಿಗೆ ಸಾರ್ವಜನಿಕರು ಸಾಮಾಜಿಕ ಅಂತರ ಕಾಪಾಡಿಕೊಳ್ಳುವಂತೆ ನಿಗಾ ವಹಿಸಬೇಕು , ಮಾಸ್ಕ್ ಗಳನ್ನು ಕಡ್ಡಾಯವಾಗಿ ಧರಿಸಿಬೇಕು ಎಂಬ ನಾಮಫಲಕಗಳನ್ನು ಅಳವಡಿಸಬೇಕು, ಒಂದು ವೇಳೆ ಕೋವಿಡ್ ಮಾರ್ಗಸೂಚಿ ಪಾಲಿಸಿದ್ದಿದ್ದಲ್ಲಿ ಅವರೊಂದಿಗೆ ವ್ಯವಹರಿಸಲು ಮುಂದಾಗಬಾರದು ಎಂದರು.
ಮಾಲ್ ಗಳ ಪ್ರವೇಶ ದ್ವಾರದ ಬಳಿ ಥರ್ಮಲ್ ಸ್ಕ್ಯಾನಿಂಗ್ ಮಾಡುವುದರ ಜೊತೆಗೆ ಮಾಸ್ಕ್ ಧರಿಸಿದ್ದರೆ ಮಾತ್ರ ಪ್ರವೇಶಕ್ಕೆ ಅವಕಾಶ ನೀಡಬೇಕು , ಮಾಲ್ ಒಳಗೆ ಜನದಟ್ಟಣೆಯಾಗದಂತೆ ಎಚ್ಚರ ವಹಿಸಿ ಶೇ. 50 ಕ್ಕಿಂತ ಕಡಿಮೆ ಜನಸಾಂದ್ರತೆ ಇರುವಂತೆ ಕ್ರಮ ವಹಿಸಬೇಕು. ಒಂದು ವೇಳೆ ನಿಯಮ ಉಲ್ಲಂಘಿಸಿದಲ್ಲಿ ಮಾಲ್ ಗಳನ್ನು ಮುಚ್ಚುವಂತೆ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಕ್ರಮ ವಹಿಸುವಂತೆ ಸೂಚನೆ ನೀಡಿದರು.ಡಿಸಿ ಜೊತೆ ಅಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
06/01/2022 11:38 am