ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ತೀವ್ರಗತಿಯಲ್ಲಿ ಏರುತ್ತಿರುವ ಹಿನ್ನೆಲೆಯಲ್ಲಿ ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ
ಉಸ್ತುವಾರಿ ಸಚಿವ ಸುನಿಲ್ ಕುಮಾರ್ ನೇತೃತ್ವದಲ್ಲಿ ಕೋವಿಡ್ ಸಭೆ ನಡೆಯಿತು.
ಸಭೆಯಲ್ಲಿ ಕೊರೊನಾ ನಿರ್ಮೂಲನೆ ಕುರಿತು ಮಾತನಾಡಿದ ಸಚಿವರು,ಜಿಲ್ಲೆಯಲ್ಲಿ 979 ಸಕ್ರಿಯ ಪ್ರಕರಣಗಳಿವೆ.ಈ ಪೈಕಿ 61ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಎಲ್ಲ ಸೋಂಕಿತರ ಮನೆ ಸೀಲ್ ಮಾಡಿದ್ದೇವೆ.ಪ್ರತಿದಿನ 8 ಸಾವಿರ ಜನರ ಕೊರೊನಾ ಟೆಸ್ಟ್ ಮಾಡಲಾಗುತ್ತಿದೆ.
ಜಿಲ್ಲೆಯಲ್ಲಿ ಒಟ್ಟು 54 ಸಾವಿರ ವಿದ್ಯಾರ್ಥಿಗಳಿಗೆ ವ್ಯಾಕ್ಸಿನ್ ನೀಡಲಾಗಿದೆ.ಸಂಜೆ 7 ಗಂಟೆ ನಂತರ ಬೀಚ್ ಪ್ರವೇಶಕ್ಕೆ ನಿಷೇಧ ಹೇರಿದ್ದೇವೆ ಎಂದರು.
PublicNext
10/01/2022 06:14 pm