ಉಡುಪಿ: ಉಡುಪಿ ಜಿಲ್ಲೆಯ ಏಳು ತಾಲೂಕುಗಳಲ್ಲಿ ಕೊರೊನಾ ಲಸಿಕೆ ನೀಡುವ ಡ್ರೈ ರನ್ ನಡೆಯಲಿದೆ. ಉಡುಪಿ ನಗರದ ಕೂಸಮ್ಮ ಶಂಭು ಶೆಟ್ಟಿ ಹಾಜಿ ಅಬ್ದುಲ್ಲಾ ಆಸ್ಪತ್ರೆಯಲ್ಲಿ ಜಿಲ್ಲಾ ಕೇಂದ್ರದ ಡ್ರೈ ರನ್ ನಡೆಯಲಿದೆ.
ಕುಂದಾಪುರ, ಕಾರ್ಕಳ, ಬೈಂದೂರು, ಕಾಪು, ಹೆಬ್ರಿ, ಬ್ರಹ್ಮಾವರದ ತಾಲೂಕು ಆರೋಗ್ಯ ಕೇಂದ್ರಗಳಲ್ಲಿ ಡ್ರೈ ರನ್ ಗೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಡಿ ಎಚ್ ಒ ಡಾ. ಸುಧೀರ್ ಚಂದ್ರ ಸೂಡ ಮಾಹಿತಿ ನೀಡಿದ್ದಾರೆ.
ಆಸ್ಪತ್ರೆಯ ಕಾರ್ಯ ಚಟುವಟಿಕೆ ಎಂದಿನಂತೆ ನಡೆಯಲಿದ್ದು, ಡ್ರೈ ರನ್ ನಿಂದ ಆಸ್ಪತ್ರೆಗೆ ಬರುವ ರೋಗಿಗಳಿಗೆ ಸಮಸ್ಯೆ ಆಗುವುದಿಲ್ಲ ಎಂದರು. ಕೇಂದ್ರ ಆರೋಗ್ಯ ಇಲಾಖೆಯ ಸೂಚನೆಯಂತೆ ಮೂರು ಹಂತದಲ್ಲಿ ಈ ಡ್ರೈ ರನ್ ನಡೆಯಲಿರುವುದಾಗಿ ತಿಳಿಸಿದರು.
Kshetra Samachara
07/01/2021 03:15 pm