ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ದ.ಕ. ಜಿಲ್ಲೆಯಾದ್ಯಂತ ಕೋವಿಡ್ ನಿಯಂತ್ರಣ ಲಸಿಕೆ ನೀಡುವಿಕೆಗೆ ಚಾಲನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 6 ಕೇಂದ್ರಗಳಲ್ಲಿ ಕೋವಿಡ್ ನಿಯಂತ್ರಣ ಲಸಿಕೆ ನೀಡುವ ಕಾರ್ಯಕ್ರಮ ವೆನ್ಲಾಕ್ ಆಸ್ಪತ್ರೆಯ ಆಯುಷ್ ವಿಭಾಗದಲ್ಲಿ ನಡೆಯಿತು. ಸಚಿವ ಕೋಟ ಶ್ರೀನಿವಾಸ ಪೂಜಾರಿ ಚಾಲನೆ ನೀಡಿದರು. ಶಾಸಕ ವೇದವ್ಯಾಸ ಕಾಮತ್, ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಉಪಸ್ಥಿತರಿದ್ದರು.

ದಕ್ಷಿಣ ಕನ್ನಡ ಜಿಲ್ಲೆಗೆ 24,500 ಡೋಸ್ ಕೋವಿಡ್ ಲಸಿಕೆ ಯನ್ನು ಜಿಲ್ಲೆಯ 6 ಕೇಂದ್ರಗಳಲ್ಲಿ ಆರೋಗ್ಯ ಕಾರ್ಯಕರ್ತರಿಗೆ ನೀಡಲಾಗುತ್ತದೆ. ಒಟ್ಟು 52,381 ಗುರುತಿಸಲಾದ ಫಲಾನುಭವಿಗಳಿಗೆ ವಿತರಿಸಲಾಗುತ್ತದೆ.

ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಮಂಗಳೂರು ಆಯುಷ್ ವಿಭಾಗ, ನಗರ ಪ್ರಾಥಮಿಕ ಆರೋಗ್ಯಕೇಂದ್ರ ಸುರತ್ಕಲ್ ಮಂಗಳೂರು, ತಾಲೂಕು ಆಸ್ಪತ್ರೆ ಬಂಟ್ವಾಳ, ತಾಲೂಕು ಆಸ್ಪತ್ರೆ ಬೆಳ್ತಂಗಡಿ, ತಾಲೂಕು ಸಾರ್ವಜನಿಕ ಆಸ್ಪತ್ರೆ ಪುತ್ತೂರು, ತಾಲೂಕು ಆಸ್ಪತ್ರೆ ಸುಳ್ಯದಲ್ಲಿ ಈ ಲಸಿಕೆ ನೀಡಲಾಗುತ್ತದೆ. ಒಂದು ಲಸಿಕೆ ಶಿಬಿರದಲ್ಲಿ ಒಂದು ದಿನಕ್ಕೆ ನೂರು ಮಂದಿ ಫಲಾನುಭವಿಗಳಿಗೆ ಮಾತ್ರ ಲಸಿಕೆ ನೀಡಲಾಗುವುದು.

ಲಸಿಕೆ ಶಿಬಿರ ಬೆಳಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ನಡೆಯಲಿದೆ. ಫಲಾನುಭವಿಗಳಿಗೆ ಮಾತ್ರ ಲಸಿಕೆ ನೀಡಲಾಗುವುದು. ಶಿಬಿರದಲ್ಲಿ ಲಸಿಕೆಗೆ ಯಾವುದೇ ಫಲಾನುಭವಿಗಳ ನೋಂದಣಿ ಇರುವುದಿಲ್ಲ.

ಈಗಾಗಲೇ ನೋಂದಣಿಯಾಗಿರುವ ಫಲಾನುಭವಿಗಳನ್ನು ಗುರುತಿಸಿ, ಸಿಲಸಿಕೆ ನೀಡಲಾಗುವುದು. ಕೋವಿಡ್-19 ವ್ಯಾಕ್ಸಿನೇಷನ್ ಆದ ನಂತರ ಪ್ರತಿ ಫಲಾನುಭವಿಯೂ 30 ನಿಮಿಷ ಆರೋಗ್ಯ ಕಾರ್ಯಕರ್ತರ ನಿಗಾದಲ್ಲಿ ಕಡ್ಡಾಯವಾಗಿ ವಿಶ್ರಾಂತಿ ಪಡೆಯಬೇಕು.

ಲಸಿಕೆ ನಂತರ ಏನಾದರೂ ಅಡ್ಡ ಪರಿಣಾಮ ಕಾಣಿಸಿಕೊಂಡಲ್ಲಿ ವೈದ್ಯಕೀಯ ತಂಡದ ಮೂಲಕ ಚಿಕಿತ್ಸೆಗೆ ಎಲ್ಲ ರೀತಿ ವ್ಯವಸ್ಥೆ ಮಾಡಲಾಗಿದೆ. 89 ಸರಕಾರಿ,17 ಖಾಸಗಿ ಸಂಸ್ಥೆಗಳನ್ನು ಲಸಿಕೆ ನೀಡಲು

ಗುರುತಿಸಲಾಗಿದೆ.

Edited By : Manjunath H D
Kshetra Samachara

Kshetra Samachara

16/01/2021 01:13 pm

Cinque Terre

20.62 K

Cinque Terre

0

ಸಂಬಂಧಿತ ಸುದ್ದಿ