ಉಡುಪಿ: ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮ ಫೆ.27ರಂದು ನಡೆಯಲಿದ್ದು, ಜಿಲ್ಲೆಯ 5 ವರ್ಷದೊಳಗಿನ ಒಟ್ಟು 73,995 ಮಕ್ಕಳಿಗೆ ಪೋಲಿಯೋ ಲಸಿಕೆ ನೀಡಲು ಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಡಿ.ಸಿ, ಈ ಬಾರಿ ಗ್ರಾಮೀಣ ಪ್ರದೇಶದ 61,105 ಹಾಗೂ ನಗರ ಪ್ರದೇಶಗಳ 12,890 ಐದು ವರ್ಷದೊಳಗಿನ ಮಕ್ಕಳಿಗೆ ಒಂದು ಡ್ರಾಪ್ ಪೋಲಿಯೊ ಲಸಿಕೆ ಹಾಕುವ ಗುರಿ ಇದೆ ಎಂದು ಹೇಳಿದರು.
ಇದಕ್ಕಾಗಿ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ 571 ಹಾಗೂ ನಗರ ಪ್ರದೇಶಗಳಲ್ಲಿ 91 ಸೇರಿದಂತೆ ಒಟ್ಟು 662 ಲಸಿಕಾ ಕೇಂದ್ರಗಳನ್ನು ತೆರೆಯಲಾಗುವುದು. ಇದಲ್ಲದೆ 6 ಮೊಬೈಲ್ ಟೀಮ್ ಮತ್ತು 36 ಟ್ರಾನ್ಸಿಟ್ ಬೂತ್ ಗಳನ್ನು ಹಾಗೂ ಎಲ್ಲಾ ಟೋಲ್‌ಗೇಟ್‌ಗಳಲ್ಲಿಯೂ ಲಸಿಕಾ ಕೇಂದ್ರಗಳನ್ನು ತೆರೆದು ಲಸಿಕೆ ನೀಡಲಾಗುವುದು. ಉಡುಪಿ ನಗರ ಒಂದರಲ್ಲೇ 19 ಟ್ರಾನ್ಸಿಟ್ ಬೂತ್‌ಗಳಿರುತ್ತವೆ ಎಂದು ಮಾಹಿತಿ ನೀಡಿದರು.
Kshetra Samachara
23/02/2022 09:53 pm