ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುಳ್ಯದಲ್ಲಿ ತಾಲೂಕು ಮಟ್ಟದ ಆರೋಗ್ಯ ಮೇಳ : ಸಚಿವ ಅಂಗಾರ ಅಭಿಮತ

ಸುಳ್ಯ: ಆರೋಗ್ಯ ರಕ್ಷಣೆ, ಉತ್ತಮ ಆರೋಗ್ಯ ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಆರೋಗ್ಯದ ಪರಿಕಲ್ಪನೆ ಪ್ರತಿಯೊಬ್ಬರಲ್ಲಿಯೂ ಜಾಗೃತವಾಗಿರಬೇಕು ಎಂದು ಬಂದರು ಮೀನುಗಾರಿಕೆ ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಹೇಳಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಯುಷ್ ಇಲಾಖೆ, ಸುಳ್ಯ ತಾಲೂಕು ಆಡಳಿತ, ತಾಲೂಕು ಪಂಚಾಯತ್, ತಾಲೂಕು ಆರೋಗ್ಯಾಧಿಕಾರಿ ಕಚೇರಿ, ಕೆವಿಜಿ ವೈದ್ಯಕೀಯ ಮಹಾ ವಿದ್ಯಾಲಯ ಮತ್ತು ಆಸ್ಪತ್ರೆಯ ಆಶ್ರಯದಲ್ಲಿ 75ನೇ ವರ್ಷದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಕೆವಿಜಿ ಮೆಡಿಕಲ್ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ಆರೋಗ್ಯ ಮೇಳ ಹಾಗು ಅರೋಗ್ಯ ಕಾರ್ಯಕ್ರಮಗಳ ಜಾಗೃತಿ ಅಭಿಯಾನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕೋವಿಡ್ ಮಹಾ ಮಾರಿ ಅಪ್ಪಳಿಸಿದ ಸಂದರ್ಭದಲ್ಲಿ ಜಗತ್ತಿಗೆ ಮಾದರಿಯಾಗುವ ನಿಟ್ಟಿನಲ್ಲಿ ಭಾರತ ಕಾರ್ಯನಿತರ್ವಹಿಸಿದೆ. ಕೋವಿಡ್ನ ಮೂರು ಅಲೆಯ ಸಂದರ್ಭದಲ್ಲಿ ಜನರ ಆರೋಗ್ಯ ರಕ್ಷಣೆಗೆ ಪಣತೊಟ್ಟು ಕೇಂದ್ರ ಮತ್ತು ರಾಜ್ಯ ಸರಕಾರ ಕೆಲಸ ಮಾಡಿದೆ. ಕಳೆದ ಒಂದೆರಡು ವರ್ಷಗಳಲ್ಲಿ ಆರೋಗ್ಯ ಕ್ಷೇತ್ರದಲ್ಲಿ ದೊಡ್ಡ ಕ್ರಾಂತಿ ಆಗಿದೆ, ಆರೋಗ್ಯಾ ಚಿಕಿತ್ಸಾ ಕ್ಷೇತ್ರದಲ್ಲಿ ಅಮೂಲಾಗ್ರ ಬದಲಾವಣೆ ಸಾಧ್ಯವಾಗಿದೆ ಎಂದು ಅವರು ಹೇಳಿದರು. ಆಯುಷ್ಮಾನ್ ಕಾರ್ಡ್ ಮೂಲಕ 5 ಲಕ್ಷದವರೆಗಿನ ಚಿಕಿತ್ಸಾ ವೆಚ್ಚವನ್ನು ಉಚಿತವಾಗಿ ನೀಡಲಾಗುತಿದೆ. ಮಾಹಿತಿ ಕೊರತೆಯಿಂದ ಜನರಿಗೆ ಹಲವು ಯೋಜನೆಗಳು ತಲುಪದ ಸ್ಥಿತಿ ಇದೆ. ಆದುದರಿಂದ ಸರಕಾರದ ಪ್ರತಿಯೊಂದು ಯೋಜನೆಗಳ ಮಾಹಿತಿಯನ್ನು ಜನರಿಗೆ ಸಮರ್ಪಕವಾಗಿ ತಲುಪಿಸುವಂತಗಬೇಕು ಎಂದು ಸಚಿವರು ಹೇಳಿದರು.

ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ವಿನಯಕುಮಾರ್ ಕಂದಡ್ಕ ಅಧ್ಯಕ್ಷತೆ ವಹಿಸಿದ್ದರು. ಸುಳ್ಯ ತಹಶೀಲ್ದಾರ್ ಅನಿತಾಲಕ್ಷ್ಮಿ, ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ.ಮಹದೇವ್, ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಶ್ಮಿ ಅಶೋಕ್ ಸೇರಿದಂತೆ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.ಬಳಿಕ ಆರೋಗ್ಯ ತಪಾಸಣಾ ಕಾರ್ಯಕ್ರಮ ಮತ್ತು ಮಾಹಿತಿ ಕಾರ್ಯಕ್ರಮ ನಡೆಯಿತು.

Edited By : Nirmala Aralikatti
Kshetra Samachara

Kshetra Samachara

22/04/2022 09:46 pm

Cinque Terre

11.37 K

Cinque Terre

0

ಸಂಬಂಧಿತ ಸುದ್ದಿ