ಕುಂದಾಪುರ: ರೋಗಿಗಳಿಗೆ ಉತ್ತಮ ಚಿಕಿತ್ಸೆ, ವಾತಾವರಣ ಕಲ್ಪಿಸಿಕೊಡುವ ಆಸ್ಪತ್ರೆಯನ್ನು ಉತ್ತೇಜಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ 2015ರಿಂದ ಕಾಯಕಲ್ಪ ಪ್ರಶಸ್ತಿ ನೀಡಲಾಗುತ್ತಿದೆ. ಈ ಪ್ರಶಸ್ತಿಗೆ ಕುಂದಾಪುರದ ಸರ್ಕಾರಿ ಉಪವಿಭಾಗ ಆಸ್ಪತ್ರೆ ಮೊದಲ ಬಾರಿ ಆಯ್ಕೆಯಾಗಿದೆ. ಒಟ್ಟು 16 ಮಾನದಂಡಗಳನ್ನು ಪರಿಗಣಿಸಿ ನೀಡಲಾಗುತ್ತದೆ. ಈ ಮಾನದಂಡಗಳಲ್ಲಿ ಸರ್ಕಾರಿ ಉಪವಿಭಾಗ ಆಸ್ಪತ್ರೆ 83.3 ಅಂಕ ಪಡೆಯುವುದರೊಂದಿಗೆ ಕಾಯಕಲ್ಪ ಪ್ರಶಸ್ತಿಗೆ ಪಾತ್ರವಾಗಿದೆ.
Kshetra Samachara
30/04/2022 03:49 pm