ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಣಿಪಾಲ: ತಂಬಾಕು ಮುಕ್ತ ಅಪಾರ್ಟ್‌ಮೆಂಟ್: ಏನಿದು ಯೋಜನೆ?

ಮಣಿಪಾಲ: ವಸತಿ ಸಮುಚ್ಚಯ ಗಳಲ್ಲಿ ತಂಬಾಕು ಉತ್ಪನ್ನ ಬಳಸುವುದನ್ನು ಸ್ವತ: ಅಲ್ಲಿನ ನಿವಾಸಿಗರೇ ಸ್ವಯಂ ಪ್ರೇರಣೆಯಿಂದ ನಿರ್ಬಂಧಿಸಿ, ತಂಬಾಕು ಮುಕ್ತ ವಸತಿ ಸಮುಚ್ಛಯವನ್ನಾಗಿ ಮಾರ್ಪಡಿಸುವ ಪ್ರಾಯೋಜಿಕ ಯೋಜನೆಯೊಂದನ್ನು ಅನುಷ್ಠಾನಗೊಳಿಸಲು ಉಡುಪಿ ಜಿಲ್ಲೆಯನ್ನು ಪೈಲೆಟ್ ಆಗಿ ಬಳಸಲು ರಾಜ್ಯ ಸರಕಾರ ಮುಂದಾಗಿದೆ.

ಉಡುಪಿ- ಮಣಿಪಾಲಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹೊರ ಜಿಲ್ಲೆ ಹೊರರಾಜ್ಯಗಳಿಂದ ವಲಸೆ ಬಂದ ಕುಟುಂಬಗಳು, ವಿದ್ಯಾರ್ಥಿಗಳು, ನೌಕರರು ವಾಸ ಮಾಡುತ್ತಿದ್ದಾರೆ. ಇಲ್ಲಿ ವಸತಿ ಸಮುಚ್ಛಯಗಳು ಕೂಡಾ ಹೆಚ್ಚಿನ ಸಂಖ್ಯೆಯಲ್ಲಿ ರುವುದರ ಜೊತೆಗೆ ಅವುಗಳಿಗೆ ಬೇಡಿಕೆಯೂ ಇದೆ. ಆದರೆ ಇಲ್ಲಿಯ ವರೆಗೆ ಇಲ್ಲಿನ ಯಾವುದೇ ಸಮುಚ್ಛಯಗಳಲ್ಲಿ ತಂಬಾಕು ಮತ್ತು ಧೂಮಪಾನ ಮುಕ್ತಗೊಳಿಸುವಂತಹ ಚಟುವಟಿಕೆಗಳು ನಡೆದಿರುವ ಬಗ್ಗೆ ಕಂಡುಬಂದಿಲ್ಲ.

ಪೈಲಟ್ ಯೋಜನೆ

ಇಲ್ಲಿನ ವಸತಿ ಸಮುಚ್ಛಯಗಳನ್ನು ತಂಬಾಕು ಮುಕ್ತ ಸಮುಚ್ಛಯಗಳನ್ನಾಗಿ ಮಾರ್ಪಡಿಸುವುದರ ಬಗ್ಗೆ ಪೈಲಟ್ ಯೋಜನೆ ರೂಪಿಸಿ, ಅದು ಯಶಸ್ವಿಯಾದಲ್ಲಿ ಈ ಯೋಜನೆಯನ್ನು ಇಡೀ ರಾಜ್ಯಕ್ಕೆ ವಿಸ್ತರಿಸುವ ಉದ್ದೇಶ ಸರಕಾರದ್ದು. ಉಡುಪಿ ಜಿಲ್ಲಾ ಸರ್ವೇಕ್ಷಣಾ ಘಟಕದಿಂದ ಜಿಲ್ಲೆಯಲ್ಲಿ ಈ ಪ್ರಾಯೋಗಿಕ ಯೋಜನೆ ಅನುಷ್ಠಾನಗೊಳ್ಳಲಿದ್ದು, ವಸತಿ ಸಮುಚ್ಛಯಗಳ ಸಮೀಕ್ಷಾ ಕಾರ್ಯ ಮತ್ತು ಯೋಜನೆ ಅನುಷ್ಠಾನಕ್ಕೆ ಅಗತ್ಯವಿರುವ ಎಲ್ಲಾ ಪೂರ್ವ ಸಿದ್ಧತೆಗಳನ್ನು ಈಗಾಗಲೇ ಕೈಗೊಳ್ಳಲಾಗಿದೆ.

ಪ್ರಸ್ತುತ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧವಿದ್ದು, ವಸತಿ ಸಮುಚ್ಛಯಗಳನ್ನು ಧೂಮಪಾನ ಮುಕ್ತಗೊಳಿಸುವುದರಿಂದ ಅಲ್ಲಿನ ನಿವಾಸಿ ಗಳಿಗೆ ಆರೋಗ್ಯಕರ ವಾತಾವರಣ ನಿರ್ಮಿಸಲು ಸಾದ್ಯವಾಗಲಿದೆ. ಜೊತೆಗೆ ಮುಂದಿನ ದಿನಗಳಲ್ಲಿ ವಸತಿ ಸಮುಚ್ಛಯಗಳ ನಿರ್ಮಾಣ ಸಂದರ್ಭದಲ್ಲೇ ಸಾರ್ವಜನಿಕರು ಧೂಮಪಾನ ಮುಕ್ತ ಸಮುಚ್ಛಯಗಳ ನಿರ್ಮಾಣಕ್ಕೆ ಬೇಡಿಕೆ ಸಲ್ಲಿಸುವ ಸಾದ್ಯತೆಗಳಿವೆ.

Edited By : Nagaraj Tulugeri
Kshetra Samachara

Kshetra Samachara

14/09/2022 06:16 pm

Cinque Terre

3.51 K

Cinque Terre

1

ಸಂಬಂಧಿತ ಸುದ್ದಿ