ಉಡುಪಿ: ಪ್ರತಿನಿತ್ಯ ವಿಭಿನ್ನ ರೀತಿಯ ಜಾಗೃತಿಗೆ ಹೆಸರಾದ ಉಡುಪಿ ಜಿಲ್ಲಾ ನಾಗರೀಕ ಸಮಿತಿ ಇಂದು ವಿಶಿಷ್ಟ ರೀತಿಯಲ್ಲಿ ಕೊರೊನಾ ಜಾಗೃತಿ ಕಾರ್ಯ ಹಮ್ಮಿಕೊಂಡಿತ್ತು.
ನಾಗರೀಕ ಸಮಿತಿ ಸಂಚಾಲಕ ನಿತ್ಯಾನಂದ ಒಳಕಾಡು ಖುದ್ದು ವೇಷ ಧರಿಸಿ ,ಕೆಲಕಾಲ ನಗರದ ವಿವಿಧೆಡೆ ಸಂಚರಿಸಿ ಜಾಗೃತಿ ಮೂಡಿಸಿದರು.
ಜಾಗೃತಿ ಅಭಿಯಾನಕ್ಕೆ ನಗರ ಠಾಣೆ ಇನ್ಸ್ ಪೆಕ್ಟರ್ ಹರೀಶ್ ಚಾಲನೆ ನೀಡಿದರು. ಕಲ್ಸಂಕ ,ಸಿಟಿ ಬಸ್ ನಿಲ್ದಾಣ ಮತ್ತು ಸರ್ವಿಸ್ ಬಸ್ ನಿಲ್ದಾಣಗಳಲ್ಲಿ ಮಾಸ್ಕ್ ಬಗ್ಗೆ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಬಗ್ಗೆ ಜನರಲ್ಲಿ ಮತ್ತು ವಾಹನ ಸವಾರರಲ್ಲಿ ಜಾಗೃತಿ ಮೂಡಿಸಲಾಯಿತು.
ಈ ಕಾರ್ಯಕ್ರಮವು ಮುಂದಿನ ದಿನಗಳಲ್ಲೂ ಮುಂದುವರೆಯಲಿದೆ ಎಂದು ನಿತ್ಯಾನಂದ ಒಳಕಾಡು ಹೇಳಿದ್ದಾರೆ.
Kshetra Samachara
15/01/2022 12:43 pm