ಉಡುಪಿ: ಉಡುಪಿಯ ಸರ್ವಿಸ್ ಬಸ್ಸು ನಿಲ್ದಾಣದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ಮಹಿಳೆಯನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ರಕ್ಷಿಸಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಮಹಿಳೆ ಕಾರ್ಕಳ ಅಜೆಕಾರಿನ ನಿವಾಸಿಯಾಗಿದ್ದು, ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ. ಮಹಿಳೆಯ ಸ್ಥಿತಿ ಗಂಭೀರವಾಗಿದ್ದು ಸಂಬಂಧಿಕರು ಜಿಲ್ಲಾಸ್ಪತ್ರೆಯ ನಾಗರಿಕ ಸಹಾಯ ಕೇಂದ್ರ ಸಂಪರ್ಕಿಸಲು ಸೂಚಿಸಲಾಗಿದೆ.
Kshetra Samachara
15/06/2022 07:54 pm