ಮಣಿಪಾಲ: 19 ವರ್ಷದ ಎಂಐಟಿ ವಿದ್ಯಾರ್ಥಿ ವೆಮುಲಾ ಸುದರ್ಶನ್ ಚೌಧರಿ ಅವರ ಮೆದುಳು ರಸ್ತೆ ಅಪಘಾತದಲ್ಲಿ ನಿಷ್ಕ್ರಿಯಗೊಂಡಿದ್ದು ಅಂಗದಾನ ಮಾಡುವ ಮೂಲಕ ಕೊನೆ ಕ್ಷಣದಲ್ಲಿ ಜೀವನ ಸಾರ್ಥಕತೆ ಮೆರೆದಿದ್ದಾರೆ. ಇವರು ದಾನ ಮಾಡಿದ ಅಂಗಗಳನ್ನು ಉಡುಪಿ ಮತ್ತು ದಕ್ಷಿಣ ಕನ್ನಡ ಪೊಲೀಸರ ಬೆಂಬಲದೊಂದಿಗೆ ಮಣಿಪಾಲದಿಂದ ಮಂಗಳೂರಿಗೆ ಮತ್ತು ಬೆಂಗಳೂರಿಗೆ ಗ್ರೀನ್ ಕಾರಿಡಾರ್ ಮೂಲಕ ವರ್ಗಾಯಿಸಲಾಯಿತು.
ಇವರ ಯಕೃತ್ತನ್ನು ಮಂಗಳೂರು ಕೆಎಂಸಿ ಆಸ್ಪತ್ರೆಗೆ ಮತ್ತು ಶ್ವಾಸಕೋಶವನ್ನು ಬೆಂಗಳೂರಿನ ಆಸ್ಟರ್ ಆಸ್ಪತ್ರೆಗೆ ಹಾಗೂ ಮೂತ್ರಪಿಂಡವನ್ನು ಮಂಗಳೂರಿನ ಎಜೆ ಆಸ್ಪತ್ರೆಗೆ ಕಳುಹಿಸಿಕೊಡಲಾಯಿತು. ಎರಡು ಕಾರ್ನಿಯಾಗಳು/ಕಣ್ಣುಗುಡ್ಡೆಗಳು, ಒಂದು ಮೂತ್ರಪಿಂಡ ಮತ್ತು ಚರ್ಮವನ್ನು ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ರೋಗಿಗಳಿಗೆ ಬಳಸಲಾಯಿತು. ವಿದ್ಯಾರ್ಥಿಯ ಹೆತ್ತವರ ಈ ಮಾನವೀಯ ನಿರ್ಧಾರಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.
PublicNext
12/10/2022 09:16 pm