ಮಂಗಳೂರು: ಕೇರಳದಲ್ಲಿ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ದ.ಕ.ಜಿಲ್ಲೆಯಲ್ಲಿ ಇಂದೂ ಕೂಡಾ ವೀಕ್ ಎಂಡ್ ಕರ್ಫ್ಯೂ ಜಾರಿಯಲ್ಲಿದೆ. ಮಧ್ಯಾಹ್ನ 2ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದ್ದು, ಆ ಬಳಿಕ ಅನಗತ್ಯ ಸಂಚಾರಕ್ಕೆ ಪೊಲೀಸರು ಕಡಿವಾಣ ಹಾಕುತ್ತಿದ್ದಾರೆ.
ಮಧ್ಯಾಹ್ನದ ಬಳಿಕ ಆಯಕಟ್ಟಿನ ಸ್ಥಳಗಳಲ್ಲಿ ಪೊಲೀಸರು ಬ್ಯಾರಿಕೇಡ್ ಹಾಕಿ ಅನಗತ್ಯ ಓಡಾಟ ನಡೆಸುವವರ ಮೇಲೆ ಹದ್ದಿನ ಕಣ್ಣಿರಿಸಿದ್ದಾರೆ. ಮಾಸ್ಕ್ ಧರಿಸದವರ ಮೇಲೂ ಪೊಲೀಸರು ಗರಂ ಆಗುತ್ತಿರುವ ದೃಶ್ಯ ಬಂದಿತು. ವೀಕ್ ಎಂಡ್ ಕರ್ಫ್ಯೂ ನಿನ್ನೆ ರಾತ್ರಿಯಿಂದ ಸೋಮವಾರ ಬೆಳಗ್ಗೆ 5ರವರೆಗೆ ಜಾರಿಯಲ್ಲಿದ್ದು, ಎರಡೂ ದಿನವೂ ಇದೇ ರೀತಿಯ ನಿಯಮ ಜಾರಿಯಲ್ಲಿದೆ.
Kshetra Samachara
14/08/2021 04:15 pm