ಉಡುಪಿ: ಉಡುಪಿ ಜಿಲ್ಲೆಯನ್ನು ಕೂಡ ವೀಕೆಂಡ್ ಕರ್ಪ್ಯೂ ಇರುವ ಜಿಲ್ಲೆಗಳ ಪಟ್ಟಿಯಲ್ಲಿ ರಾಜ್ಯ ಸರ್ಕಾರ ಸೇರಿಸಿದೆ.ಇದನ್ನು ರದ್ದುಮಾಡಬೇಕು ಎಂದು ಉಡುಪಿ ಶಾಸಕ ರಘುಪತಿ ಭಟ್ ಹೇಳಿದ್ದಾರೆ.
ಉಡುಪಿಯಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಪಾಸಿಟಿವಿಟಿ ರೇಟ್ ಕೂಡ 1.5 ರಲ್ಲಿದೆ. ಹೀಗಾಗಿ ಇಲ್ಲಿ ವೀಕೆಂಡ್ ಕರ್ಪ್ಯೂ ಅವಶ್ಯಕತೆ ಇಲ್ಲ. ಈಗ ಸ್ವಲ್ಪ ವ್ಯವಹಾರ ವ್ಯಾಪಾರಗಳು ಚೇತರಿಸಿಕೊಳ್ಳುತ್ತಿವೆ. ಇಂತಹ ಸಂದರ್ಭದಲ್ಲಿ ಮತ್ತೆ ಕರ್ಫ್ಯೂ ಜಾರಿ ಮಾಡಿದರೆ ಸಮಸ್ಯೆ ಉಂಟಾಗಲಿದೆ.ಉಡುಪಿ ಜಿಲ್ಲೆ ಗಡಿ ಜಿಲ್ಲೆ ಅಲ್ಲ. ದಕ್ಷಿಣ ಕನ್ನಡ ಜಿಲ್ಲೆ ಗಡಿ ಜಿಲ್ಲೆ. ಹಾಗಾಗಿ ಉಡುಪಿಯಲ್ಲಿ ವೀಕೆಂಡ್ ಕರ್ಪ್ಯೂ ಬೇಡ ಎಂದು ಮುಖ್ಯಮಂತ್ರಿಗಳು ಮತ್ತು ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಅವರಲ್ಲಿ ಆಗ್ರಹಿಸುತ್ತೇನೆ ಎಂದು ಶಾಸಕ ರಘುಪತಿ ಭಟ್ ಹೇಳಿದ್ದಾರೆ.
Kshetra Samachara
31/08/2021 12:10 pm