ಕೊಲ್ಲೂರು: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನಲ್ಲಿರುವ ಪ್ರಸಿದ್ಧ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬರುವವರು ಇನ್ನುಮುಂದೆ ಆಧಾರ್ ಕಾರ್ಡ್ ಕಡ್ಡಾಯವಾಗಿ ತರಬೇಕಾಗಿದೆ.
ಕೊಲ್ಲೂರು ಮೂಕಾಂಬಿಕೆಯ ದರ್ಶನಕ್ಕೆ ಆಧಾರ್ ಕಾರ್ಡ್ ಕಡ್ಡಾಯ ಮಾಡಿ ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಆದೇಶ ಹೊರಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆಡಳಿತ ಮಂಡಳಿಯು ಭಕ್ತರಿಗೆ ಸೂಚನೆ ನೀಡಿದೆ. ದೇವಳದ ಪ್ರವೇಶ ದ್ವಾರದಲ್ಲಿ ಆಧಾರ್ ಕಾರ್ಡ್ ತೋರಿಸಿದರೆ ಮಾತ್ರ ಇನ್ನು ಮುಂದೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ಹೊರ ರಾಜ್ಯ, ಹೊರ ಜಿಲ್ಲೆಯಿಂದ ಬರುವ ಭಕ್ತರಿಗೆ ವ್ಯಾಕ್ಸಿನೇಷನ್ ಮತ್ತು ಕೋವಿಡ್ ನೆಗೆಟಿವ್ ರಿಪೋರ್ಟ್ ಕೂಡ ಕಡ್ಡಾಯಗೊಳಿಸಲಾಗಿದೆ.
ಜಿಲ್ಲಾಧಿಕಾರಿಯವರ ಆದೇಶ ಈ ರೀತಿ ಇದೆ:
ಕೋವಿಡ್-19 ಹಿನ್ನೆಲೆಯಲ್ಲಿ ಪ್ರಸ್ತುತ ವಿದ್ಯಮಾನಗಳನ್ನು ಪರಿಗಣಿಸಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಮಾನ್ಯ ಜಿಲ್ಲಾಧಿಕಾಲಯವರು ಉಲ್ಲೇಖದ ಆದೇಶದಲ್ಲಿ ತಿಳಿಸಿರುವ ಸೂಚನೆ ಮೇರೆಗೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ದಿನಾಂಕ : 04.09.2021 ರಿಂದ ಅನ್ವಯವಾಗುವಂತೆ ಮುಂದಿನ ಆದೇಶದವರೆಗೆ ದೇವಸ್ಥಾನದ ಪ್ರವೇಶದ್ವಾರದಲ್ಲಿ ದೇವಾಲಯ ಪ್ರವೇಶಿಸುವ ಎಲ್ಲಾ ಭಕ್ತಾದಿಗಳ ಆಧಾರ್ ಕಾರ್ಡ್ ಪರಿಶೀಲಿಸಿ, ಹೆಸರು, ಊರು, ಮೊಬೈಲ್ ಸಂಖ್ಯೆಯನ್ನು ದಾಖಅಸಲಾಗುವುದು ಮತ್ತು ಕೇರಳ ರಾಜ್ಯದಿಂದ ಆಗಮಿಸುವ ಭಕ್ತರು 72 ಗಂಟೆಗಳ ಒಳಗೆ ಮಾಡಿಸಿರುವ ಕೋವಿಡ್ – 19 RTPCR ನೆಗೆಟಿವ್ ವರದಿ ಹೊಂದಿರತಕ್ಕದ್ದು. ಕ್ಷೇತ್ರದಲ್ಲಿ ಸಾಮಾಜಿಕ ಅಂತರ ಕಾಪಾಡುವುದು ಮತ್ತು ಮಾಸ್ಕ್ ಧಲಿಸುವುದು ಕಡ್ಡಾಯವಾಗಿರುತ್ತದೆ. ಸಾರ್ವಜನಿಕ ಭಕ್ತಾದಿಗಳು ಸಹಕರಿಸಬೇಕಾಗಿ ಕೋರಲಾಗಿದೆ.
Kshetra Samachara
04/09/2021 09:02 pm