ಉಡುಪಿ;ಅಂತೂ ಉಡುಪಿ ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ರದ್ದುಗೊಂಡಿದೆ.ಈ ಸಂಬಂಧ ಉಡುಪಿ ಜಿಲ್ಲಾಧಿಕಾರಿ ಕೂರ್ಮ ರಾವ್ ಇವತ್ತು ಆದೇಶ ಹೊರಡಿಸಿದ್ದಾರೆ.
ವಾರಾಂತ್ಯ ಕರ್ಫ್ಯೂ ಬಗ್ಗೆ ಸರಕಾರದಿಂದ ನಿರ್ದೇಶನ ಬಂದಿದೆ.ಜಿಲ್ಲಾಮಟ್ಟದಲ್ಲಿ ತೀರ್ಮಾನ ಕೈಗೊಳ್ಳಲು ಸೂಚಿಸಿದ್ದಾರೆ.ಅದರಂತೆ
ಜಿಲ್ಲೆಯಲ್ಲಿ ತಜ್ಞರ ಸಮಿತಿ ಸಭೆ ಮಾಡಿದ್ದೇವೆ.ತಕ್ಷಣದಿಂದ ಜಾರಿಗೆ ಬರುವಂತೆ ವಾರಾಂತ್ಯ ಕರ್ಪ್ಯೂ ಹಿಂಪಡೆಯಲಾಗಿದೆ.
ಉಳಿದಂತೆ ಎಲ್ಲ ನಿರ್ಬಂಧಗಳು ಹಿಂದಿನಂತೆಯೇ ಮುಂದುವರೆಯುತ್ತವೆ.
18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಕೊರೋನಾ ಲಸಿಕೆ ಪಡೆಯಿರಿ ಎಂದು ಜಿಲ್ಲಾಧಿಕಾರಿ ಕೂರ್ಮ ರಾವ್ ಮನವಿ ಮಾಡಿದ್ದಾರೆ.
Kshetra Samachara
10/09/2021 12:51 pm