ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: 'ಒಮಿಕ್ರಾನ್' ಹಿನ್ನೆಲೆ; ದ.ಕ. ಗಡಿ ಪ್ರದೇಶಗಳಲ್ಲಿ ತೀವ್ರ ತಪಾಸಣೆ

ಮಂಗಳೂರು: ಕೊರೊನಾದ ಹೊಸ ರೂಪಾಂತರಿ ವೈರಸ್ ಒಮಿಕ್ರಾನ್ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಗಡಿಗಳಲ್ಲಿ ತಪಾಸಣೆ ತೀವ್ರಗೊಳಿಸಲಾಗಿದೆ. ಎಲ್ಲ ಗಡಿಗಳಲ್ಲೂ ತಪಾಸಣೆ ನಡೆಸಲಾಗುತ್ತಿದ್ದು, ಮೂರು ಪಾಳಿಯಲ್ಲಿ ಸಿಬ್ಬಂದಿ ನಿಯೋಜಿಸಲಾಗಿದೆ.

ಇಂದಿನಿಂದ ಆರ್ ಟಿಪಿಸಿಆರ್ ನೆಗೆಟಿವ್ ವರದಿ ಕಡ್ಡಾಯಗೊಳಿಸಲಾಗಿದೆ. ಇಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಲಪಾಡಿ ಗಡಿಗೆ ಭೇಟಿ ನೀಡಿ ಪರಿಶೀಲಿಸಿದರು.

ತಲಪಾಡಿ ಸೇರಿದಂತೆ ಎಲ್ಲ ಗಡಿಗಳಲ್ಲಿ ಬಿಗಿ ತಪಾಸಣೆ ಆರಂಭಗೊಂಡಿದೆ. ಇತರ ಇಲಾಖೆಗಳ ಸಿಬ್ಬಂದಿಯನ್ನೂ ನಿಯೋಜನೆ ಮಾಡಲಾಗಿದೆ.

ಇಂದಿನಿಂದ ಆಗಮಿಸುವವರು ಆರ್ ಟಿಪಿಸಿಆರ್ ವರದಿ ಹೊಂದಿರಬೇಕು. ನಿತ್ಯ ಪ್ರಯಾಣಿಕರಿಗೆ ತೊಂದರೆಯಾಗದಂತೆ ಕ್ರಮಕೈಗೊಳ್ಳಲಾಗಿದೆ. ದ.ಕ. ಜಿಲ್ಲಾಡಳಿತ ವತಿಯಿಂದ ನಿತ್ಯಪ್ರಯಾಣಿಕರಿಗೆ ಆರ್ ಟಿಪಿಸಿಆರ್ ಪರೀಕ್ಷೆಗೂ ಅವಕಾಶ ಕಲ್ಪಿಸಲಾಗಿದೆ.

ಈಗಾಗಲೇ ಜಿಲ್ಲೆಗೆ ಆಗಮಿಸಿದ ಕೇರಳ ವಿದ್ಯಾರ್ಥಿಗಳ ಸ್ಕ್ರೀನಿಂಗ್ ಮಾಡಲಾಗುತ್ತಿದೆ. ಅಲ್ಲದೆ, ಎಲ್ಲ ಕ್ಯಾಂಪಸ್, ಕಾಲೇಜು ವಿದ್ಯಾರ್ಥಿಗಳ ಸ್ಕ್ರೀನಿಂಗ್ ಗೆ ಸೂಚನೆ ನೀಡಲಾಗಿದೆ.

ದ.ಕ. ಜಿಲ್ಲೆಯ ಬಹುತೇಕ ಪ್ರದೇಶ ಗಡಿ ಪ್ರದೇಶಗಳಾಗಿವೆ. ದ.ಕ.- ಕಾಸರಗೋಡು ನಡುವೆ ಅವಿನಾಭಾವ ಸಂಬಂಧವಿದ್ದು, ಜನರಿಗೆ ತೊಂದರೆಯಾಗದಂತೆ ನಿರ್ವಹಣೆ ಮಾಡಬೇಕಾಗಿದೆ. ಕಾಸರಗೋಡಿನ ಹೆಚ್ಚಿನ ಜನರು ಮಂಗಳೂರನ್ನೇ ಅವಲಂಬಿಸಿದ್ದಾರೆ.

Edited By : Nagesh Gaonkar
Kshetra Samachara

Kshetra Samachara

29/11/2021 06:05 pm

Cinque Terre

17.56 K

Cinque Terre

2