ಉಡುಪಿ: ಶ್ರೀ ಕೃಷ್ಣಮಠದ ಪರ್ಯಾಯ ಮಹೋತ್ಸವ ಇದೇ ತಿಂಗಳ ಜನವರಿ 17- 18ರಂದು ನಡೆಯಲಿದೆ. ಶ್ರೀ ಕೃಷ್ಣಾಪುರ ಮಠದ ಪರ್ಯಾಯಕ್ಕೆ ಈಗ ಕೋವಿಡ್ ಕರಿನೆರಳು ಬಿದ್ದಿದೆ.
ಈ ಹಿನ್ನೆಲೆಯಲ್ಲಿ ಮಾತನಾಡಿದ ಸಚಿವ ಸುನಿಲ್ ಕುಮಾರ್ , " ರಾತ್ರಿ 9 ಗಂಟೆವರೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅವಕಾಶವಿದೆ.
ಅಷ್ಟ ಮಠದ ಸ್ವಾಮೀಜಿಗಳು ಸೀಮಿತ ಕಲಾತಂಡಗಳ ಮೆರವಣಿಗೆಯಲ್ಲಿ ಭಾಗವಹಿಸುತ್ತಾರೆ. ಪರ್ಯಾಯ ಮಹೋತ್ಸವದಲ್ಲಿ ಧಾರ್ಮಿಕತೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಸೀಮಿತ ಸಂಖ್ಯೆಯ ಜನರೊಂದಿಗೆ ಪರ್ಯಾಯ ದರ್ಬಾರ್ ಸಭೆ ನಡೆಯಲಿದೆ.
ಭಾವಿ ಪರ್ಯಾಯ ಕೃಷ್ಣಾಪುರ ಮಠವೂ ಇದಕ್ಕೆ ಒಪ್ಪಿಗೆ ನೀಡಿದೆ. ಅಪಾರ ಸಂಖ್ಯೆಯಲ್ಲಿ ಜನ ಭಾಗವಹಿಸಬಾರದೆಂದು ವಿನಂತಿ ಮಾಡುತ್ತೇವೆ. ಆದರೆ, ಕೃಷ್ಣಮಠದಲ್ಲಿ ದೇವರ ದರ್ಶನಕ್ಕೆ ಯಾವುದೇ ಅಡ್ಡಿ ಇಲ್ಲ" ಎಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆ ಬಳಿಕ ಇಂಧನ- ಕನ್ನಡ ಸಂಸ್ಕೃತಿ ಸಚಿವ ಸುನಿಲ್ ಹೇಳಿದರು.
Kshetra Samachara
10/01/2022 06:55 pm