ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಮಾಸ್ಕ್ ಹಾಕದಿದ್ರೆ ಇನ್ಮುಂದೆ ಕಿಸೆಗೆ ಕತ್ತರಿ ಖಚಿತ!

ಮಂಗಳೂರು: ಕೊರೊನಾ ತಡೆಯಲು ಮಾಸ್ಕ್ ಧರಿಸದೇ ಸಾರ್ವಜನಿಕ ಸ್ಥಳಗಳಲ್ಲಿ ಓಡಾಡುವವರಿಗೆ ಹಾಗೂ ಮಾಸ್ಕ್ ರಹಿತ ವ್ಯಾಪಾರಿಗಳಿಗೆ ಮಂಗಳೂರು ಮಹಾನಗರ ಪಾಲಿಕೆ ಇನ್ಮುಂದೆ 200 ರೂ. ದಂಡ ವಿಧಿಸಲು ತೀರ್ಮಾನಿಸಿದೆ.

ಮಾಸ್ಕ್ ಹಾಕಿಕೊಳ್ಳದೆ ಬೈಕ್, ಕಾರುಗಳಲ್ಲಿ ಸಂಚರಿಸುವವರು ಹಾಗೂ ಸಾರ್ವಜನಿಕ ರಸ್ತೆಗಳಲ್ಲಿ ಓಡಾಡುವವರ ಮೇಲೆ ಪಾಲಿಕೆಯ ಸಿಬ್ಬಂದಿ ಹದ್ದಿನ ಕಣ್ಣಿಟ್ಟಿದ್ದಾರೆ.

ಅಲ್ಲಲ್ಲಿ ಜನರು ಮಾಸ್ಕ್ ಧರಿಸದೆ ಓಡಾಡುತ್ತಿರುವುದು ಕಂಡು ಬರುತ್ತಿದೆ. ಹೀಗಾಗಿ ಕಟ್ಟುನಿಟ್ಟಾಗಿ ದಂಡ ವಿಧಿಸಲು ತೀರ್ಮಾನಿಸಲಾಗಿದೆ.

Edited By : Nagesh Gaonkar
Kshetra Samachara

Kshetra Samachara

30/09/2020 11:43 am

Cinque Terre

37.48 K

Cinque Terre

1