ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ವೆನ್ಲಾಕ್ ಜಿಲ್ಲಾಸ್ಪತ್ರೆಗೆ ನ್ಯಾಯಾಧೀಶರಿಂದ ಅನಿರೀಕ್ಷಿತ ಭೇಟಿ

ಮಂಗಳೂರು: ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶೋಭಾ ಬಿ.ಜಿ. ಇಂದು ಜಿಲ್ಲಾ ವೆನ್ಲಾಕ್ ಆಸ್ಪತ್ರೆಗೆ ಅನಿರೀಕ್ಷಿತ ಭೇಟಿ ನೀಡಿದರು.

ಆಸ್ಪತ್ರೆಗೆ ಏಕಾಏಕಿ ಭೇಟಿ ನೀಡಿರುವ ನ್ಯಾಯಾಧೀಶೆ ಶೋಭಾ ಬಿ.ಜಿ. ಒಳರೋಗಿಗಳ ವಾರ್ಡ್ ಗಳಿಗೆ ಭೇಟಿ ನೀಡಿದರು. ಈ ಸಂದರ್ಭ ರೋಗಿಗಳ ಕುಂದುಕೊರತೆಗಳನ್ನು ಆಲಿಸಿದರು. ಅವರಿಗೆ ನೀಡುತ್ತಿರುವ ಔಷಧಿಗಳ ಬಗ್ಗೆ ಮಾಹಿತಿ ಪಡೆದರು.

ಈ ಸಂದರ್ಭ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಡಿಎಂಒ ಹಾಗೂ ಸಿಬ್ಬಂದಿಯಿದ್ದರು.

Edited By : Nirmala Aralikatti
Kshetra Samachara

Kshetra Samachara

30/06/2022 10:53 pm

Cinque Terre

6.82 K

Cinque Terre

0

ಸಂಬಂಧಿತ ಸುದ್ದಿ