ಉಡುಪಿ: ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷ ನ್ಯಾ.ವೀರಪ್ಪ ಅವರಿಂದು ಉಡುಪಿ ಜಿಲ್ಲಾಸ್ಪತ್ರೆಗೆ ಧಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಜಿಲ್ಲಾ ಪ್ರವಾಸದಲ್ಲಿರುವ ನ್ಯಾಯಮೂರ್ತಿಗಳು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಆಸ್ಪತ್ರೆಯಲ್ಲಿನ ಕುಂದುಕೊರತೆ ಮತ್ತು ವ್ಯವಸ್ಥೆಗಳ ಕುರಿತು ಪರಿಶೀಲನೆ ನಡೆಸಿದರು. ಇದೇ ಸಂಧರ್ಭದಲ್ಲಿ ಆಸ್ಪತ್ರೆಯ ರೋಗಿಗಳ ಜೊತೆಗೆ ನ್ಯಾಯಮೂರ್ತಿಗಳು ಸಂವಾದ ನಡೆಸಿದರು.
ಈ ಸಂಧರ್ಭದಲ್ಲಿ ಮಾತನಾಡಿದ ಅವರು ,ಆಸ್ಪತ್ರೆಯನ್ನು ಚೆನ್ನಾಗಿ ನಿರ್ವಹಣೆ ಮಾಡಲಾಗುತ್ತಿದೆ. ಕಟ್ಟಡ ಹಳೆಯದಾಗಿದೆ ಎಂಬ ದೂರು ಇದೆ. ಇದು ಈಗಾಗಲೇ ಮೇಲ್ದರ್ಜೆಗೇರುತ್ತಿದೆ. ಸಾರ್ವಜನಿಕರು ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಇಲ್ಲಿನ ಆರೋಗ್ಯ ಸೇವೆಯನ್ನು ಬಳಸುವಂತೆ ಪ್ರೋತ್ಸಾಹಿಸಬೇಕು. ಜಿಲ್ಲೆಯಲ್ಲಿ ನಿರ್ಗತಿಕರ ಕೇಂದ್ರ ಇಲ್ಲ. ಇದರ ಕುರಿತಾಗಿ ಮಾಧ್ಯಮಗಳು ಬೆಳಕು ಚೆಲ್ಲಿ ಸರಕಾರದ ಗಮನ ಸೆಳೆಯ ಬೇಕು ಎಂದರು.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶಾಂತವೀರ ಶಿವಪ್ಪ, ಜಿಲ್ಲಾ ಸರ್ಜನ್ ಮಧುಸೂಧನ್, ಸಾಮಾಜಿಕ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು ಮತ್ತಿತರರು ಈ ಸಂದರ್ಭ ಉಪಸ್ಥಿತರಿದ್ದರು.
Kshetra Samachara
10/09/2022 02:49 pm