ಕಾಪು : ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಜಿಲ್ಲಾ ಕಾನೂನು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶೆ ಶರ್ಮಿಳಾ ಎಸ್. ಅವರು ಭೇಟಿ ನೀಡಿ,ಆಸ್ಪತ್ರೆ ಯಲ್ಲಿ ಲಭ್ಯವಿರುವ ಚಿಕಿತ್ಸೆಗಳ ಬಗ್ಗೆ ಪರಿಶೀಲಿಸಿದರು.ಆಸ್ಪತ್ರೆಗೆ ಬರುವ ರೋಗಿಗಳು ಮತ್ತು ಸಾರ್ವಜನಿಕರ ಜೊತೆಗೆ ಮಾತುಕತೆ ನಡೆಸಿದರು.
ಸಿಬ್ಬಂದಿಗಳ ಕೊರತೆ ಬಗ್ಗೆ ಮಾಹಿತಿ ಪಡೆದುಕೊಂಡ ಅವರು ಈ ಬಗ್ಗೆ ಹೈಕೋರ್ಟ್ ನಿರ್ದೇಶನದ ಪ್ರಕಾರ ಸರಕಾರಕ್ಕೆ ಆಗ್ರಹ ಪತ್ರ ಬರೆಯುವ ಭರವಸೆ ನೀಡಿದರು.
ಕಾಪು ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯೆದ್ಯಾಧಿಕಾರಿ ಡಾ| ಸುಬ್ರಾಯ ಕಾಮತ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ ಹಾಗೂ ಸಿಬ್ಬಂದಿ ವರ್ಗದವರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.
Kshetra Samachara
13/09/2022 09:22 pm