ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಆತಂಕ ಸೃಷ್ಟಿಸಿದ ಜಲಸಿರಿ ಕುಡಿಯುವ ನೀರುನೀರಿನ ಪರೀಕ್ಷೆಗೆ ಗ್ರಾಮಸ್ಥರ ಆಗ್ರಹ

ಕುಂದಾಪುರ: ಕೇಂದ್ರ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಯಲ್ಲೊಂದಾದ ಪ್ರತಿ ಮನೆಮನೆಗೂ ಕುಡಿಯುವ ನೀರು ಸರಬರಾಜು ಯೊಜನೆಯಡಿಯಲ್ಲಿ ಕುಂದಾಪುರ ಪುರಸಭಾ ವ್ಯಾಪ್ತಿಯಲ್ಲಿ ಸರಬರಾಜಾಗುತ್ತಿರುವ ಕುಡಿಯುವ ನೀರು ನಾಗರೀಕರ ಆತಂಕಕ್ಕೆ ಕಾರಣವಾಗಿದೆ.

ಕುಂದಾಪುರ ಪುರಸಭೆ ವ್ಯಾಪ್ತಿಯಲ್ಲಿನ ಚಿಕನ್ ಸಾಲ್ ಸಂಗಮ್ ರಸ್ತೆಯಲ್ಲಿನ ಮನೆಗಳಲ್ಲಿ ಜಲಸಿರಿಯ ಕುಡಿಯುವ ನೀರು ಕುಡಿಯಲು ಯೋಗ್ಯವಲ್ಲ ಎನ್ನುವ ಅನುಮಾನ ಆರಂಭವಾಗಿದೆ. ನಲ್ಲಿಗಳಲ್ಲಿ ಸರಬರಾಜಾಗುವ ನೀರು ಸಾಬೂನಿನ ನೊರೆಯಂತೆ ತೋರುತ್ತಿದ್ದು, ಸ್ವಲ್ಪ ಸಮಯದ ನಂತರ ನೊರೆ ಮಾಯವಾಗುತ್ತದೆ.

ಈ ಕಲುಷಿತ ನೀರು ಕುಡಿದು ಅನೇಕರಿಗೆ ಆರೋಗ್ಯದಲ್ಲಿ ಏರುಪೇರಾಗಿದ್ದು ತಕ್ಷಣ ಶುದ್ಧ ಕುಡಿಯುವ ನೀರು ಸರಬರಾಜು ಮಾಡುವಂತೆ ಸಂಬಂಧ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂಬುದಾಗಿ ಕೋಡಿ ಅಶೋಕ ಪೂಜಾರಿ ಆಗ್ರಹಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

18/09/2022 11:12 am

Cinque Terre

3.83 K

Cinque Terre

0