ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಾಪುರ: ಭಾರತೀಯ ಮನೋವೈದ್ಯಕೀಯ ಸಂಘ ಕರ್ನಾಟಕ ಶಾಖೆಯ 32ನೇ ವಾರ್ಷಿಕ ಸಮ್ಮೇಳನ ಉದ್ಘಾಟನೆ

ಇಂದಿನ ಒತ್ತಡಮಯ ಜಗತ್ತಿನಲ್ಲಿ ಮಾನಸಿಕ ಆರೋಗ್ಯ ಅತ್ಯವಶ್ಯಕ. ನಮ್ಮ ಮನಸ್ಸಿನ ಸಮಸ್ಯೆಗಳಿಗೆ ವೈದ್ಯರಲ್ಲಿ ಹೋಗದಿದ್ದರೆ ಪರಿಹಾರ ದೊರಕದು. ಮಾನಸಿಕ ಆರೋಗ್ಯವನ್ನು ಸಮುದಾಯದ ನೆಲೆಯಲ್ಲಿ ವಿಸ್ತರಿಸಲು ನಡೆಯುತ್ತಿರುವ ಸಮ್ಮೇಳನ ಅರ್ಥಪೂರ್ಣ ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ನುಡಿದರು.

ಕೋಟೇಶ್ವರದ ಯುವ ಮೆರಿಡಿಯನ್ ಸಭಾಂಗಣದಲ್ಲಿ ಭಾರತೀಯ ಮನೋವೈದ್ಯಕೀಯ ಸಂಘ ಕರ್ನಾಟಕ ಶಾಖೆಯ 32ನೇ ವಾರ್ಷಿಕ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.

ಭಾರತೀಯ ಮನೋವೈದ್ಯಕೀಯ ಸಂಘದ ಅಧ್ಯಕ್ಷ ಡಾ.ಎನ್.ಎನ್.ರಾಜು ಮಾತನಾಡಿ, ದೇಶದಲ್ಲೇ ಕರ್ನಾಟಕ ಮಾನಸಿಕ ಆರೋಗ್ಯ ಕ್ಷೇತ್ರದಲ್ಲಿ ಮುಂಚೂಣಿಯ ಸ್ಥಾನ ಅಲಂಕರಿಸಿದೆ. ಉಡುಪಿ ಜಿಲ್ಲೆಯ ಸಣ್ಣ ಪಟ್ಟಣ ಕುಂದಾಪುರ ಮನೋವೈದ್ಯರ ಅತ್ಯುತ್ತಮ ಸೇವಾ ನೆಲೆಯಾಗಿದೆ. ಡಾ.ಕೆ.ಎಸ್.ಕಾರಂತ ಅವರಂತಹ ಹಿರಿಯ ವೈದ್ಯರ ಸೇವೆ ಕುಂದಾಪುರ ಮಾತ್ರವಲ್ಲ ದೇಶವ್ಯಾಪಿ ಮನೆ ಮಾತಾಗಿದೆ. ಮನೋವೈದ್ಯರ ಸೇವೆ ಮತ್ತು ಕಾಳಜಿ ಕರ್ನಾಟಕದಲ್ಲಿ ಉಚ್ಛ್ರಾಯ ಸ್ಥಿತಿಯಲ್ಲಿದೆ ಎಂದು ಅವರು ನುಡಿದರು.

ಭಾರತೀಯ ಮನೋವೈದ್ಯಕೀಯ ಸಂಘದ ಕರ್ನಾಟಕ ಶಾಖೆ ಅಧ್ಯಕ್ಷ ಡಾ.ಪಿ.ಕಿರಣ್ಕುರಮಾರ್ ಅಧ್ಯಕ್ಷತೆ ವಹಿಸಿದ್ದರು. ಭಾರತೀಯ ಮನೋವೈದ್ಯಕೀಯ ಸಂಘದ ನಿಯೋಜಿತ ಅಧ್ಯಕ್ಷ ಡಾ.ವಿನಯಕುಮಾರ್, ಭಾರತೀಯ ಮನೋವೈದ್ಯಕೀಯ ಸಂಘದ ದಕ್ಷಿಣ ವಲಯ ಅಧ್ಯಕ್ಷ ಡಾ.ಉದಯಕುಮಾರ್, ಭಾರತೀಯ ಮನೋವೈದ್ಯಕೀಯ ಸಂಘದ ಕರ್ನಾಟಕ ಶಾಖೆಯ ನಿಯೋಜಿತ ಅಧ್ಯಕ್ಷ ಡಾ.ಎನ್.ಎಂ.ಪಾಟೀಲ್, ಗೌರವ ಕಾರ್ಯದರ್ಶಿ ಡಾ.ಸೋಮಶೇಖರ್ ಬಿಜ್ಜಲ್, ಸಮ್ಮೇಳನ ಸಮಿತಿಯ ಕಾರ್ಯದರ್ಶಿ ಡಾ.ರವೀಂದ್ರ ಮುನೋಳಿ ಉಪಸ್ಥಿತರಿದ್ದರು. ಸಮ್ಮೇಳನ ಸಮಿತಿಯ ಅಧ್ಯಕ್ಷ ಡಾ.ಪ್ರಕಾಶ್ ತೋಳಾರ್ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಮ್ಮೇಳನದಲ್ಲಿ ದೇಶದ ವಿವಿಧ ರಾಜ್ಯಗಳ ಮನೋವೈದ್ಯರು ಪಾಲ್ಗೊಂಡಿದ್ದರು.

Edited By :
PublicNext

PublicNext

12/09/2022 03:52 pm

Cinque Terre

23.94 K

Cinque Terre

0

ಸಂಬಂಧಿತ ಸುದ್ದಿ