ಮುಲ್ಕಿ: ಮುಲ್ಕಿ ಸಮುದಾಯ ಆರೋಗ್ಯ ಕೇಂದ್ರದ ಅಭಿವೃದ್ಧಿ ಪ್ರಗತಿಯಲ್ಲಿ ಸಾಗುತ್ತಿದ್ದು, ಶೀಘ್ರವೇ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸಲಾಗುವುದು ಎಂದು ಮುಲ್ಕಿ-ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು.
ಅವರು ಮುಲ್ಕಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸರಕಾರದಿಂದ ಮಂಜೂರಾದ ನೂತನ ಆ್ಯಂಬುಲೆನ್ಸ್ ಉದ್ಘಾಟಿಸಿ ಮಾತನಾಡಿದರು.
ಈ ಸಂದರ್ಭ ಮುಲ್ಕಿ ನಗರ ಪಂಚಾಯತ್ ಅಧ್ಯಕ್ಷ ಸುಭಾಷ್ ಶೆಟ್ಟಿ, ಉಪಾಧ್ಯಕ್ಷ ಸತೀಶ್ ಅಂಚನ್, ಮಾಜಿ ಅಧ್ಯಕ್ಷ ಸುನಿಲ್ ಆಳ್ವ, ಸದಸ್ಯರಾದ ಶೈಲೇಶ್ ಕುಮಾರ್, ರಾಧಿಕಾ ಕೋಟ್ಯಾನ್, ಶಾಂತಾ ಕಿರೋಡಿಯನ್,
ದಯಾವತಿ ಅಂಚನ್, ಬಿಜೆಪಿ ಮುಖಂಡರಾದ ಜಯಾನಂದ ಮುಲ್ಕಿ, ರಮಾನಾಥ್ ಪೈ, ಹರಿಶ್ಚಂದ್ರ ಕೋಟ್ಯಾನ್ ಕೆಎಸ್ ರಾವ್ ನಗರ, ವಿಠಲ್ ಎನ್. ಎಂ.,ಅಶೋಕ್ ಜನನಿ, ಮುಲ್ಕಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯ ಡಾ. ಜಗದೀಶ್ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
28/12/2020 09:43 am