ಉಡುಪಿ: ಉಡುಪಿ ಜಿಲ್ಲೆಯಲ್ಲಿ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾಯಿತು.ಜಿಲ್ಲಾಧಿಕಾರಿ ಜಿ. ಜಗದೀಶ್ , ಜಿಪಂ ಅಧ್ಯಕ್ಷ ದಿನಕರ ಬಾಬು, ಶಾಸಕ ರಘುಪತಿ ಭಟ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಚಾಲನೆ ನೀಡಿದರು.
ಪ್ರಧಾನಿ ನರೇಂದ್ರ ಮೋದಿಯವರು ದೇಶವನ್ನುದ್ದೇಶಿಸಿ ಭಾಷಣ ಮಾಡಿದ ಬಳಿಕ ದೇಶಾದ್ಯಂತ ಚಾಲನೆ ಸಿಗುತ್ತಿದ್ದಂತೆಯೇ ಉಡುಪಿಯಲ್ಲೂ ಲಸಿಕೆ ವಿತರಣೆಗೆ ಚಾಲನೆ ಸಿಕ್ಕಿತು. ಗಣಪತಿ ಹೆಗಡೆ ಮತ್ತು ಓರ್ವ ಗ್ರೂಪ್ ಡಿ ನೌಕರ ನಾಗರಾಜ್ ಈ ಇಬ್ಬರಿಗೆ ಮೊದಲ ಲಸಿಕೆ ನೀಡಲಾಯಿತು. ಜಿಲ್ಲೆಯಲ್ಲಿ ಈಗಾಗಲೇ 12 ಸಾವಿರ ಲಸಿಕೆಗಳನ್ನು ಸಂಗ್ರಹಿಸಿಡಲಾಗಿದೆ.
Kshetra Samachara
16/01/2021 02:02 pm