ಮಂಗಳೂರು: ದ.ಕ. ಜಿಲ್ಲೆಯಲ್ಲಿ ಜ.31ರಂದು ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲೆಯಲ್ಲಿ ಈ ಬಾರಿ 1,51,398 ಗುರಿ ಇರಿಸಲಾಗಿದೆ ಎಂದು ದ.ಕ.ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಚಂದ್ರ ಬಾಯಿರಿ ಹೇಳಿದರು.
ನಗರದ ಪ್ರೆಸ್ ಕ್ಲಬ್ ನಲ್ಲಿ ಮಾತನಾಡಿದ ಅವರು, ಪ್ರತೀ ವರ್ಷದಂತೆ 921 ಲಸಿಕಾ ಬೂತ್ ತೆರೆಯಲಾಗಿದೆ. ಅಂದು ಬೆಳಗ್ಗೆ 8ರಿಂದ ಸಂಜೆ 5ರ ವರೆಗೆ ಲಸಿಕಾ ಕಾರ್ಯಕ್ರಮ ನಡೆಯಲಿದೆ ಎಂದರು.
ಜೊತೆಗೆ ಜಿಲ್ಲೆಯಲ್ಲಿ ಆರು ಮೊಬೈಲ್ ಲಸಿಕಾ ಬೂತ್ ಗಳನ್ನು ತೆರೆಯಲಾಗುತ್ತದೆ. ಅಲ್ಲದೆ ರೈಲು ನಿಲ್ದಾಣ, ವಿಮಾನ ನಿಲ್ದಾಣ, ಬಸ್ ತಂಗುದಾಣ ಸೇರಿದಂತೆ 26 ಟ್ರಾಂಸಿಯಂಟ್ ಬೂತ್ ಗಳನ್ನು ತೆರೆಯಲಾಗುತ್ತದೆ. ಆದ್ದರಿಂದ ಎಲ್ಲ ಹೆತ್ತವರು ಐದು ವರ್ಷಗಳ ಕೆಳಗಿನ ತಮ್ಮ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕಿಸಬೇಕೆಂದು ಡಾ.ರಾಮಚಂದ್ರ ಬಾಯಿರಿ ವಿನಂತಿಸಿದರು.
Kshetra Samachara
29/01/2021 05:26 pm