ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಮಕ್ಕಳಿಗೆ ಲಸಿಕೆ ಹಾಕುವ ಮೂಲಕ ಪೋಲಿಯೊ ಅಭಿಯಾನಕ್ಕೆ ಶಾಸಕರಿಂದ ಚಾಲನೆ

ಮಂಗಳೂರು: ನಗರದ ಲೇಡಿಗೋಷನ್ ಆಸ್ಪತ್ರೆಯಲ್ಲಿ ಮಕ್ಕಳಿಗೆ ಲಸಿಕೆ ಹಾಕುವ ಮೂಲಕ ಶಾಸಕ ಡಾ.ವೈ.ಭರತ್ ಶೆಟ್ಟಿಯವರು ಪಲ್ಸ್ ಪೋಲಿಯೊ ಅಭಿಯಾನಕ್ಕೆ ಚಾಲನೆ ನೀಡಿದರು.

ದ.ಕ.ಜಿಲ್ಲೆಯಲ್ಲಿ ಈ ಬಾರಿ 1,51,398 ಮಂದಿ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕುವ ಗುರಿ ಇರಿಸಲಾಗಿದೆ. ಆದ್ದರಿಂದ ಜಿಲ್ಲೆಯಾದ್ಯಂತ ಒಟ್ಟು 921 ಲಸಿಕಾ ಬೂತ್ ಗಳನ್ನು ತೆರೆಯಲಾಗಿದೆ‌. ಅಲ್ಲದೆ, ಆರು ಮೊಬೈಲ್ ಲಸಿಕಾ ಬೂತ್ ಗಳನ್ನು ತೆರೆಯಲಾಗಿದೆ. ರೈಲು ನಿಲ್ದಾಣ, ವಿಮಾನ ನಿಲ್ದಾಣ ಹಾಗೂ ಬಸ್ ತಂಗುದಾಣಗಳು ಸೇರಿ 26 ಟ್ರ್ಯಾನ್ಸಿಟ್ ಬೂತ್ ಗಳನ್ನು ತೆರೆಯಲಾಗಿದೆ. ಕೊರೊನಾ ಮುಂಜಾಗ್ರತಾ ಕ್ರಮವನ್ನು ಪಾಲಿಸಿಯೇ ಲಸಿಕೆ ಹಾಕುವ ಕಾರ್ಯಕ್ರಮ ಆಯೋಜಿಸಿ ಎಲ್ಲ ಕಡೆಗಳಲ್ಲೂ 8ರಿಂದ 5ರ ತನಕ ಲಸಿಕಾ ಕಾರ್ಯಕ್ರಮ ಆಯೋಜಿಸಲಾಗಿದೆ‌.

ಈ ಸಂದರ್ಭ ದ.ಕ. ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಚಂದ್ರ ಬಾಯಿರಿ, ಲೇಡಿಗೋಷನ್ ಆಸ್ಪತ್ರೆಯ ಡಿಎಂಒ ಡಾ‌.ದುರ್ಗಾ ಪ್ರಸಾದ್, ವೆನ್ಲಾಕ್ ಜಿಲ್ಲಾಆಸ್ಪತ್ರೆಯ ಡಿಎಂಒ ಡಾ.ಸದಾಶಿವ ಮತ್ತಿತರರು ಉಪಸ್ಥಿತರಿದ್ದರು.

Edited By : Nagesh Gaonkar
Kshetra Samachara

Kshetra Samachara

31/01/2021 10:05 am

Cinque Terre

6.79 K

Cinque Terre

0

ಸಂಬಂಧಿತ ಸುದ್ದಿ