ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಡಬ: ಕೊಂಬಾರಿನಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ; ಆರೋಗ್ಯ, ರಕ್ತದಾನ ಶಿಬಿರ ಉದ್ಘಾಟನೆ

ಕಡಬ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಕಡಬ ತಾಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ಕಡಬ ತಾಲೂಕಿನ ಕೊಂಬಾರಿನಲ್ಲಿ ಇಂದಿನಿಂದ ನಡೆಯುವ ಪತ್ರಕರ್ತರ 'ಗ್ರಾಮ ವಾಸ್ತವ್ಯ' ಅಂಗವಾಗಿ ಹಮ್ಮಿಕೊಂಡ ಆರೋಗ್ಯ ತಪಾಸಣೆ ಶಿಬಿರ

ಉದ್ಘಾಟನೆಗೊಂಡಿತು.

ದ.ಕ. ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್ ಉದ್ಘಾಟಿಸಿದರು. ವಿವಿಧ ಇಲಾಖೆಗಳ ಸ್ಟಾಲ್ ಗಳನ್ನು ಈ ಸಂದರ್ಭ ಉದ್ಘಾಟಿಸಲಾಯಿತು. ಪುತ್ತೂರು ಸಹಾಯಕ ಕಮಿಷನರ್ ಡಾ.ಯತೀಶ್ ಉಳ್ಳಾಲ್, ಜಿ.ಪಂ. ಸದಸ್ಯ ಪಿ.ಪಿ.ವರ್ಗೀಸ್, ಕಡಬ ತಾಪಂ ಅಧ್ಯಕ್ಷೆ ರಾಜೇಶ್ವರಿ ಕನ್ಯಾಮಂಗಲ, ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಮತ್ತಿತರರು ಉಪಸ್ಥಿತರಿದ್ದರು. ಈ ಮೊದಲು ಜಿಲ್ಲಾಧಿಕಾರಿ ಹಾಗೂ ಇತರ ಅತಿಥಿಗಳಿಗೆ ಪೂರ್ಣಕುಂಭ ಸ್ವಾಗತ ನೀಡಿ, ಬರಮಾಡಿಕೊಳ್ಳಲಾಯಿತು.

Edited By : Nagesh Gaonkar
Kshetra Samachara

Kshetra Samachara

31/01/2021 12:32 pm

Cinque Terre

14.22 K

Cinque Terre

0

ಸಂಬಂಧಿತ ಸುದ್ದಿ