ಮುಲ್ಕಿ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಮುಲ್ಕಿ ಹಾಗೂ ಮುಲ್ಕಿ ಲಯನ್ಸ್ ಹಾಗೂ ಲಿಯೋ ಕ್ಲಬ್ ಆಶ್ರಯದಲ್ಲಿ ಕರ್ನಾಟಕ ವನ್ ಸಹಯೋಗದೊಂದಿಗೆ ನಾಗರಿಕರಿಗೆ ಉಚಿತ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಕಾರ್ಡ್ ವಿತರಣೆ ಮುಲ್ಕಿಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಕಚೇರಿ ಬಳಿ ನಡೆಯಿತು.
ಮುಲ್ಕಿ ನ.ಪಂ. ಮಾಜಿ ಮುಖ್ಯಾಧಿಕಾರಿ ಡಾ.ಹರಿಶ್ಚಂದ್ರ ಸಾಲಿಯಾನ್ ಮಾತನಾಡಿ, ಸರಕಾರದ ಸವಲತ್ತುಗಳನ್ನು ಸಂಘ-ಸಂಸ್ಥೆಗಳು ಗ್ರಾಮೀಣ ಮಟ್ಟದಲ್ಲಿ ಬಡಜನರಿಗೆ ಸಿಗುವಂತೆ ಮಾಡುತ್ತಿರುವ ಕಾರ್ಯ ಶ್ಲಾಘನೀಯ ಎಂದರು. ಅಧ್ಯಕ್ಷತೆಯನ್ನು ಆತ್ಮಶಕ್ತಿ ವಿವಿಧೋದ್ದೇಶ ಯೋಜನೆಯ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸಂಘದ ನಿರ್ದೇಶಕರಾದ ರಮಾನಾಥ ಸನಿಲ್, ಸುರೇಶ್ ವಿ.ಪೂಜಾರಿ, ಮುಲ್ಕಿ ಲಯನ್ಸ್ ಕ್ಲಬ್ ಅಧ್ಯಕ್ಷೆ ಪ್ರತಿಭಾ ಹೆಬ್ಬಾರ್, ಮಾಜಿ ಅಧ್ಯಕ್ಷ ವೆಂಕಟೇಶ ಹೆಬ್ಬಾರ್, ಉದ್ಯಮಿ ಸತೀಶ್ ಕುಮಾರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ಆತ್ಮಶಕ್ತಿ ಮುಲ್ಕಿ ಸಂಘದ ವಾಣಿಶ್ರೀ ನಿರೂಪಿಸಿದರು. ಬಳಿಕ ನಾಗರಿಕರಿಗೆ ಉಚಿತ ಆಯುಷ್ಮಾನ್ ಭಾರತ್- ಆರೋಗ್ಯ ಕರ್ನಾಟಕ ಕಾರ್ಡ್ ವಿತರಿಸಲಾಯಿತು.
Kshetra Samachara
31/01/2021 04:25 pm