ಮಂಗಳೂರು: ಮಂಗಳೂರಿನ ಉಳ್ಳಾಲ ಅಬ್ಬಕ್ಕ ಸರ್ಕಲ್ ಬಳಿ ಇರುವ ಖಾಸಗಿ ನರ್ಸಿಂಗ್ ಕಾಲೇಜಿನ 80 ವಿದ್ಯಾರ್ಥಿಗಳ ಪೈಕಿ 39 ವಿದ್ಯಾರ್ಥಿಗಳಲ್ಲಿ ಕೋವಿಡ್- 19 ಲಕ್ಷಣ ಕಂಡು ಬಂದಿದೆ.
ಹೀಗಾಗಿ ಈ ಕಾಲೇಜನ್ನು ಫೆ. 19ರ ವರೆಗೆ ಸೀಲ್ ಡೌನ್ ಮಾಡಲಾಗಿದೆ. ಖಾಸಗಿ ನರ್ಸಿಂಗ್ ಕಾಲೇಜಿನ 39 ವಿದ್ಯಾರ್ಥಿಗಳಲ್ಲಿ ಸೋಂಕು ಕಂಡು ಬಂದಿದೆ. ಈ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಹೆಚ್ಚಿನ ವಿದ್ಯಾರ್ಥಿಗಳು ಕೇರಳ ಮೂಲದವರಾಗಿದ್ದು, ಕಾಲೇಜು ಆರಂಭದ ಬಳಿಕ ವಿದ್ಯಾರ್ಥಿಗಳಿಗೆ ಕಡ್ಡಾಯ ಕೋವಿಡ್ ಪರೀಕ್ಷೆ ನಡೆಸಿದಾಗ ಸೋಂಕು ಪತ್ತೆಯಾಗಿದೆ.
ಕಾಲೇಜಿಗೆ ಜಿಲ್ಲಾ ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ನಗರಸಭೆ ಕಮಿಷನರ್ ರಾಯಪ್ಪ ಅವರು ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲೇ ಕ್ವಾರಂಟೈನ್ ಮತ್ತು ಚಿಕಿತ್ಸೆಗೆ ವ್ಯವಸ್ಥೆ ಮಾಡಿದ್ದು, ಎಲ್ಲ ವಿದ್ಯಾರ್ಥಿಗಳಿಗೆ ಕಡ್ಡಾಯ ಕ್ವಾರಂಟೈನ್ ಗೆ ಸೂಚಿಸಲಾಗಿದೆ.
Kshetra Samachara
03/02/2021 04:13 pm