ಉಡುಪಿ: ಉಡುಪಿ ಜಿಲ್ಲೆಯಲ್ಲಿ ನಿನ್ನೆಯವರೆಗೆ 15233 ಮಂದಿಗೆ ಕೊರೋನಾ ಲಸಿಕೆ ನೀಡಲಾಗಿದೆ.ಇದರೊಂದಿಗೆ ಜಿಲ್ಲೆಯಲ್ಲಿ ಇತನಕ 65 ಶೇಖಡಾರಷ್ಟು ಮಂದಿಗೆ ಕೋವಿಡ್ ಲಸಿಕೆ ನೀಡಿದಂತಾಗಿದೆ.ಇಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಲಸಿಕೆ ಪಡೆದುಕೊಂಡರು. ಅಜ್ಜರಕಾಡು ಜಿಲ್ಲಾ ಆಸ್ಪತ್ರೆಗೆ ಆಗಮಿಸಿದ ಜಿಲ್ಲಾಧಿಕಾರಿಗಳು ಕೋವಿಡ್ ಲಸಿಕೆ ಪಡೆಯುವುದರೊಂದಿಗೆ ಜಿಲ್ಲೆಯ ಜನರಿಗೆ ಧೈರ್ಯ ತುಂಬಿದ್ದಾರೆ.ನೋಂದಣಿ ಮಾಡಿಕೊಂಡ ಸುಮಾರು 35 ಶೇ.ಜನರಿಗೆ ಲಸಿಕೆ ನೀಡುವ ಕೆಲಸವನ್ನು ಆರೋಗ್ಯ ಇಲಾಖೆ ಮಾಡುತ್ತಿದೆ.
Kshetra Samachara
08/02/2021 11:34 am