ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ದ.ಕ.ಜಿಲ್ಲೆಯಲ್ಲಿ ಎರಡನೇ ಹಂತದ ಕೋವಿಡ್ ಲಸಿಕಾ ಅಭಿಯಾನ ಆರಂಭ

ಮಂಗಳೂರು: ನಗರದ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಎರಡನೇ ಹಂತದ ಕೋವಿಡ್ ಲಸಿಕಾ ಅಭಿಯಾನ ಇಂದು ಆರಂಭವಾಗಿದೆ. ದ.ಕ.ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಉಪ ಪೊಲೀಸ್ ಆಯುಕ್ತರಾದ ವಿನಯ್ ಗಾಂವ್ಕರ್, ಹರಿರಾಂ‌ ಶಂಕರ್ ಹಾಗೂ ಐಎಎಸ್ ಪ್ರೊಬೆಷನರಿ ಮೋನಾ ರಾವತ್ ಅವರಿಗೆ ಲಸಿಕೆ ಹಾಕುವ ಮೂಲಕ ದ.ಕ.ಜಿಲ್ಲೆಯ ಎರಡನೇ ಹಂತದ ಕೋವಿಡ್ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಲಾಯಿತು.

ದ.ಕ.ಜಿಲ್ಲೆಯಲ್ಲಿ ಇಂದು ಪೊಲೀಸ್ ಇಲಾಖೆ, ಕಂದಾಯ ಇಲಾಖೆ, ನಗರ ಸ್ಥಳೀಯ ಸಂಸ್ಥೆ, ಪಂಚಾಯತ್ ರಾಜ್ ಇಲಾಖೆಯ ಮುಖ್ಯ ಅಧಿಕಾರಿಗಳಿಗೆ ಲಸಿಕೆ ನೀಡುವ ಕಾರ್ಯಕ್ರಮ ನಡೆಯುತ್ತದೆ. ಜಿಲ್ಲೆಯಲ್ಲಿ ಮೂರು ದಿನಗಳಲ್ಲಿ 41ಕಡೆಗಳಲ್ಲಿ 6,400 ಮಂದಿಗೆ ಲಸಿಕೆ ನೀಡಲಾಗುತ್ತದೆ.

ಲಸಿಕೆ ನೀಡುವ ಮೊದಲು ದ.ಕ.ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರು, ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಉಪ ಪೊಲೀಸ್ ಆಯುಕ್ತರಾದ ವಿನಯ್ ಗಾಂವ್ಕರ್, ಹರಿರಾಂ‌ ಶಂಕರ್ ರಿಗೆ ರಕ್ತದೊತ್ತಡ ತಪಾಸಣೆ ನಡೆಸಿದರು.

Edited By : Manjunath H D
Kshetra Samachara

Kshetra Samachara

08/02/2021 04:29 pm

Cinque Terre

10.64 K

Cinque Terre

0

ಸಂಬಂಧಿತ ಸುದ್ದಿ