ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಕೇರಳದಲ್ಲಿ ಕೊರೊನಾ ಪ್ರಮಾಣ ಹೆಚ್ಚಳ ಹಿನ್ನೆಲೆ; ಗಡಿಯಲ್ಲಿ ಕಟ್ಟೆಚ್ಚರ, ಷರತ್ತುಬದ್ಧ ಪ್ರವೇಶ

ಮಂಗಳೂರು: ಕೇರಳದಲ್ಲಿ ಕೊರೊನಾ ಪ್ರಮಾಣ ಹೆಚ್ಚಾದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ‌ ಮಂಗಳೂರಿನ ತಲಪಾಡಿ, ಬಂಟ್ವಾಳದ ಸಾರಡ್ಕ, ಪುತ್ತೂರಿನ ನೆಟ್ಟಣಿಗೆ ಮುಡ್ನೂರು, ಸುಳ್ಯದ ಮೇಣಾಲ ಮತ್ತು ಜಾಲ್ಸೂರು ಹೊರತುಪಡಿಸಿ ಉಳಿದೆಲ್ಲ ಕೇರಳ ಜೊತೆಗಿನ ಅಂತಾರಾಜ್ಯ ಗಡಿ ಸಂಚಾರ ಮುಚ್ಚಲಾಗಿದೆ.

ತಲಪಾಡಿಯಲ್ಲಿ ಆರೋಗ್ಯ ಅಧಿಕಾರಿಗಳ ಪರಿಶೀಲನೆ ಕೇಂದ್ರ ಮತ್ತೆ ಆರಂಭಗೊಂಡಿದೆ. ಆರ್ ಟಿ ಪಿಸಿಆರ್ ವರದಿ ಕೈಯಲ್ಲಿದ್ದಲ್ಲಿ ಮಾತ್ರ ಕರ್ನಾಟಕ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತಿದೆ. ಇಂದು ಬೆಳಿಗ್ಗೆ 7 ರಿಂದ ಜಿಲ್ಲಾ ಆರೋಗ್ಯ ಅಧಿಕಾರಿ, ತಹಶೀಲ್ದಾರ್ ನೇತೃತ್ವದ ತಂಡ ತಲಪಾಡಿ ಗಡಿಭಾಗದಲ್ಲಿ ನಿಂತು ಕೇರಳದಿಂದ ಬರುವವರನ್ನು ತಡೆದು ಟೆಸ್ಟ್ ರಿಪೋರ್ಟ್ ನೀಡುವಂತೆ ಸೂಚಿಸ್ತಿದ್ದಾರೆ. ಇದೇ ವೇಳೆ ಗಡಿನಾಡು ಹೋರಾಟಗಾರರು ಅಂತರ್ ರಾಜ್ಯ ಗಡಿಗಳಲ್ಲಿ ಯಾವುದೇ ವಾಹನಗಳಿಗೆ ತಡೆಯೊಡ್ಡಬಾರದು ಎಂದು ಮನವಿ ಮಾಡಿದ್ದಾರೆ.

ಈ ಮಧ್ಯೆ ಕೇರಳದಿಂದ ಬರುವ ವಾಹನಗಳಿಗೆ ಅವಕಾಶ ಮಾಡಿಕೊಡದ ಹಿನ್ನೆಲೆಯಲ್ಲಿ ಮಂಗಳೂರಿನಿಂದ ಕೇರಳಕ್ಕೆ ತೆರಳುವ ವಾಹನಗಳನ್ನೂ ಗಡಿನಾಡು ಪ್ರದೇಶದ ಮಂದಿ ರಾಷ್ಟ್ರೀಯ ಹೆದ್ದಾರಿಯಲ್ಲಿ ತಡೆದು ಪ್ರತಿಭಟಿಸಿದ ಘಟನೆ ಕೂಡ ನಡೆಯಿತು.

Edited By : Manjunath H D
Kshetra Samachara

Kshetra Samachara

22/02/2021 12:37 pm

Cinque Terre

14.65 K

Cinque Terre

1