ಉಡುಪಿ:ಉಡುಪಿ ಜಿಲ್ಲೆಯಾದ್ಯಂತ ಡೆಂಗ್ಯೂ ಮತ್ತು ಮಲೇರಿಯಾ ಹಾವಳಿ ಜೋರಾಗಿದೆ. ಜಿಲ್ಲೆಯಾದ್ಯಂತ ನಿರಂತರವಾಗಿ ಮೂರು ತಿಂಗಳಿಂದ ಮಳೆ ಸುರಿಯುತ್ತಿದೆ.ಹೀಗಾಗಿ ಅಲ್ಲಲ್ಲಿ ನೀರು ನಿಂತ ಕಾರಣ ಸೊಳ್ಳೆಗಳ ಉತ್ಪತ್ತಿಯಾಗುತ್ತದೆ.ಈ ಹಿನ್ನೆಲೆಯಲ್ಲಿ ಉಡುಪಿ ನಗರಸಭೆ ನಗರದಾದ್ಯಂತ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಸರ್ಕಾರಿ ಕಚೇರಿ ಕಟ್ಟಡಗಳು, ಖಾಲಿ ಜಾಗಗಳಲ್ಲಿ ಬೆಳೆದಿರುವ ಗಿಡಗಂಟಿಗಳನ್ನು ಸ್ವಚ್ಛ ಮಾಡುವ ಕಾರ್ಯಕ್ರಮ ನಡೆಯುತ್ತಿದೆ. ನಾಯರ್ ಕೆರೆ ಸಮೀಪದ ಕನ್ನಡ ಸಾಹಿತ್ಯ ಪರಿಷತ್ತು ಖಾಲಿ ಜಾಗ, ಆರೋಗ್ಯ ಇಲಾಖೆಯ ಕ್ವಾಟ್ರಸ್ ಸುತ್ತಮುತ್ತ ಸ್ವಚ್ಛತಾ ಕಾರ್ಯ ನಡೆಯಿತು.
ಉಡುಪಿ ಪ್ರೆಸ್ ಕ್ಲಬ್ ವಾರ್ತಾಭವನ ಸುತ್ತ ಬೆಳೆದಿದ್ದ ಕಳೆ ಗಿಡಗಳನ್ನು ಸ್ವಚ್ಚ ಮಾಡಲಾಯ್ತು. ನಗರಸಭೆ ಕಾರ್ಯಕ್ಕೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಅಲೆವೂರು ರಾಜೇಶ್ ಶೆಟ್ಟಿ ಮತ್ತು ಸದಸ್ಯರು ಶ್ಲಾಘಿಸಿದರು.
Kshetra Samachara
28/07/2021 07:43 pm