ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ : ತಾಯಿ ಮತ್ತು ಮಕ್ಕಳ ಆಸ್ಪತ್ರೆ ಸಿಬ್ಬಂದಿಗಳಿಗೆ ಶೀಘ್ರ ವೇತನ ಪಾವತಿಸಿ: ಶಾಸಕ ರಘುಪತಿ ಭಟ್

ಉಡುಪಿ: ಸುವರ್ಣ ಆರೋಗ್ಯ ಟ್ರಸ್ಟ್ ನಿಂದ ಜಿಲ್ಲಾಸ್ಪತ್ರೆಗೆ ಪಾವತಿಯಾಗಲು ಬಾಕಿ ಇರುವ ಹಣವನ್ನು ತಕ್ಷಣ ಮಂಜೂರುಗೊಳಿಸಲು ಟ್ರಸ್ಟ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರಿಗೆ ಶಾಸಕ ಕೆ ರಘುಪತಿ ಭಟ್ ಅವರು ಸೂಚಿಸಿದ್ದಾರೆ. ಈ ಮೊತ್ತ ಮಂಜೂರಾದ ತಕ್ಷಣ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ವೈದ್ಯರು, ವೈದ್ಯಕೀಯ ಸಿಬ್ಬಂದಿ ಸೇರಿದಂತೆ ಎಲ್ಲಾ ವಿಭಾಗದ ಸಿಬ್ಬಂದಿಗಳಿಗೆ ವೇತನ ಪಾವತಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ಸೇರಿದಂತೆ ಎಲ್ಲಾ ವಿಭಾಗದ ಸಿಬ್ಬಂದಿಗಳಿಗೆ ವೇತನ ಪಾವತಿಸದೇ ಇರುವ ಬಗ್ಗೆ ಹಾಗೂ ಇತರ ಸಮಸ್ಯೆಗಳ ಕುರಿತು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಸಭೆ ನಡೆಸಿ ಚರ್ಚಿಸಿ ಚರ್ವಿಸಿದ ಬಳಿಕ ಅವರು ಮಾತನಾಡಿದರು.

ಮುಖ್ಯಮಂತ್ರಿಯವರು ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಲ್ಲಿ ಈ ಬಗ್ಗೆ ಸಭೆ ನಡೆಸಿ ಬಾಕಿ ಇರುವ ಎಲ್ಲಾ ವೇತನ ಸರ್ಕಾರದಿಂದ ಪಾವತಿಸಲು ಸೂಕ್ತ ಕ್ರಮ ಜರುಗಿಸುವ ಭರವಸೆ ನೀಡಿದ ಅವರು ಮುಷ್ಕರ ಕೈಬಿಡುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿಗಳಾದ ನಾಗಭೂಷಣ್ ಉಡುಪ, ಜಿಲ್ಲಾ ಶಸ್ತ್ರಚಿಕಿತ್ಸಕರಾದ ಮಧುಸೂದನ್ ನಾಯಕ್, ಜಿಲ್ಲಾಸ್ಪತ್ರೆಯ ವೈದ್ಯಾಧಿಕಾರಿಗಳು, ಹಾಗೂ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Edited By : Manjunath H D
Kshetra Samachara

Kshetra Samachara

09/08/2021 05:30 pm

Cinque Terre

10.23 K

Cinque Terre

0

ಸಂಬಂಧಿತ ಸುದ್ದಿ