ಮಣಿಪಾಲ: ಕಸ್ತೂರ್ಬಾ ಆಸ್ಪತ್ರೆಯಲ್ಲಿ ಕರಾವಳಿ ಕರ್ನಾಟಕದ ಮೊಟ್ಟಮೊದಲ ಸ್ಕಿನ್ ಬ್ಯಾಂಕ್ (ಚರ್ಮ ನಿಧಿ) ಅನ್ನು ಮಣಿಪಾಲ ಶಿಕ್ಷಣ ಮತ್ತು ವೈದ್ಯಕೀಯ ಸಮೂಹದ ಅಧ್ಯಕ್ಷರಾದ ಡಾ.ರಂಜನ್ ಆರ್ ಪೈ ಉದ್ಘಾಟಿಸಿದರು.
ರೋಟರಿ ಕ್ಲಬ್ ಮಣಿಪಾಲ ಟೌನ್ ಮತ್ತು ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿಯ ಪಾಲುದಾರಿಕೆಯಲ್ಲಿ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ "ರೋಟರಿ ಮಾಹೆ ಸ್ಕಿನ್ ಬ್ಯಾಂಕ್' " ಅನ್ನು ಸ್ಥಾಪಿಸಲಾಗಿದೆ. ರೋಟರಿ ಕ್ಲಬ್ ಮಣಿಪಾಲ್ ಟೌನ್ ಉಪಕರಣಗಳನ್ನು ಖರೀದಿಸಲು ರೋಟರಿ ಫೌಂಡೇಶನ್‌ನ ಜಾಗತಿಕ ಅನುದಾನ ಕಾರ್ಯಕ್ರಮದಡಿ 83 ಲಕ್ಷ ರೂಪಾಯಿಗಳನ್ನು ನೀಡಿತು. ಮತ್ತು ಅವಶ್ಯಕ ಮೂಲಸೌಕರ್ಯ ಗಳಿಗೆ ಮಾಹೆ 50 ಲಕ್ಷ ರೂಪಾಯಿಗಳನ್ನು ಕೊಡುಗೆಯಾಗಿ ನೀಡಿತು.
ರೋಟರಿ ಮಾಹೆ ಸ್ಕಿನ್ ಬ್ಯಾಂಕ್ ಉದ್ಘಾಟಿಸಿ ಮಾತನಾಡಿದ , ಡಾ ರಂಜನ್ ಪೈ ಅವರು , "ಈ ಸ್ಕಿನ್ ಬ್ಯಾಂಕ್ ನಿಂದ ಈ ಪ್ರದೇಶದ ಸುಟ್ಟ ಗಾಯಗಳ ಸಂತ್ರಸ್ತರಿಗೆ, ವಿಶೇಷವಾಗಿ ಹಿಂದುಳಿದ ಜನರಿಗೆ ಸಹಾಯವಾಗಲಿದೆ.ಸ್ಕಿನ್ ಬ್ಯಾಂಕ್‌ನಲ್ಲಿ ಸುಲಭವಾಗಿ ಲಭ್ಯವಿರುವ ಚರ್ಮವನ್ನು ಬಳಸಿಕೊಂಡು ಸ್ಕಿನ್ ಗ್ರಾಫ್ಟಿಂಗ್ ಮಾಡುವ ಮೂಲಕ, ರೋಗಿಗಳಿಗೆ ಉತ್ತಮ ಆರೈಕೆ ಸಿಗಲಿದೆ, ಮತ್ತು ಅವರ ಜೀವನದ ಗುಣಮಟ್ಟ ಮತ್ತು ಆತ್ಮವಿಶ್ವಾಸ ಹೆಚ್ಚಲಿದೆ. ಅತ್ಯಾಧುನಿಕ ಮತ್ತು ಗುಣಮಟ್ಟದ ವೈದ್ಯಕೀಯ ಆರೈಕೆ ನೀಡುವಲ್ಲಿ ಮಾಹೆ ಯಾವಾಗಲೂ ಮುಂಚೂಣಿಯಲ್ಲಿದೆ. ಈ ಸ್ಕಿನ್ ಬ್ಯಾಂಕ್‌ನೊಂದಿಗೆ, ಮಾಹೆ ವೈದ್ಯರು ಸುಟ್ಟ ಸಂತ್ರಸ್ತರಿಗೆ ಚಿಕಿತ್ಸೆ ನೀಡುವಲ್ಲಿ ತಮ್ಮ ಚಾಣಾಕ್ಷ ಕೌಶಲ್ಯಗಳೊಂದಿಗೆ ಗುಣಪಟ್ಟದ ಸೇವೆ ನೀಡಲಿದ್ದಾರೆ. ಇದನ್ನು ಸಾಧ್ಯವಾಗಿಸಿದ ರೋಟರಿ ಮತ್ತು ಮಾಹೆ ತಂಡವನ್ನು ಅಭಿನಂದಿಸುತ್ತೇನೆ" ಎಂದರು.
ಡಾ ಎನ್ ಸಿ ಶ್ರೀಕುಮಾರ್, ಪಿಎಚ್‌ಎಫ್ ಎಂಜಿ ರಾಮಚಂದ್ರ ಮೂರ್ತಿ, ಸದಾನಂದ ಚಾತ್ರ, ರಾಜಾರಾಮ್ ಭಟ್ , ಗಣೇಶ್ ನಾಯಕ್ , ಸಹ ಕುಲಾಧಿಪತಿ ಡಾ.ಎಚ್.ಎಸ್.ಬಲ್ಲಾಳ್ , ಉಪ ಕುಲಪತಿಗಳಾದ ಲೆಫ್ಟಿನೆಂಟ್ ಜನರಲ್ ಎಂ ಡಿ ವೆಂಕಟೇಶ್ , ಜಿ ಮುತ್ತಣ್ಣ ,
ಡಾ ಸುನಿಲ್ ಕೇಶ್ವಾನಿ, ಪಿಎಚ್‌ಎಫ್ ಶೇಷಪ್ಪ ರೈ ,ಗಣೇಶ್ ನಾಯಕ್, ಡಾ ರವಿರಾಜ ಎನ್ ಎಸ್, ಉಪಸ್ಥಿತರಿದ್ದರು.
*ರೋಟರಿ -ಮಾಹೆ ಸ್ಕಿನ್ ಬ್ಯಾಂಕ್ ಸಹಾಯವಾಣಿ ಸಂಖ್ಯೆ -09686676564.*
Kshetra Samachara
21/08/2021 06:47 pm