ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಕಳೆದ 20 ದಿನಗಳಲ್ಲಿ ದ.ಕ.ಜಿಲ್ಲೆಯಲ್ಲಿ 630 ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆ

ಮಂಗಳೂರು: ದ.ಕ.ಜಿಲ್ಲೆಯಲ್ಲಿ 630 ವಿದ್ಯಾರ್ಥಿಗಳಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇವರಲ್ಲಿ ಜಿಲ್ಲೆಯ ವಿದ್ಯಾರ್ಥಿಗಳಿಗಿಂತ ಹೊರ ಜಿಲ್ಲೆ, ಹೊರ ರಾಜ್ಯಗಳ ಸೋಂಕಿತ ವಿದ್ಯಾರ್ಥಿಗಳ ಸಂಖ್ಯೆ ಅಧಿಕವಾಗಿದೆ. ದ.ಕ.ಜಿಲ್ಲೆಯಲ್ಲಿ ವೈದ್ಯಕೀಯ, ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಾಗಿರುವ ಮಹಾರಾಷ್ಟ್ರ, ಕೇರಳ, ಉಡುಪಿ, ಹೊರ ಜಿಲ್ಲೆಯ ವಿದ್ಯಾರ್ಥಿಗಳಲ್ಲಿ ಪಾಸಿಟಿವ್ ಕಂಡು ಬಂದಿದೆ. ಇವರೆಲ್ಲರೂ ಜಿಲ್ಲೆಗೆ ಪರೀಕ್ಷೆ ಬರೆಯಲು ಆಗಮಿಸಿದ್ದರು. ಇವರಲ್ಲಿ ಕೆಲವರು ಆರ್ ಟಿಪಿಸಿಆರ್ ತಪಾಸಣೆಯ ನೆಗೆಟಿವ್ ವರದಿ ತಂದಿದ್ದರೂ, ಇಲ್ಲಿ ಮತ್ತೆ ತಪಾಸಣೆ ನಡೆಸಿದಾಗ ಪಾಸಿಟಿವ್ ಕಂಡು ಬಂದಿದೆ.

ಕಳೆದ 20 ದಿನಗಳ ಅವಧಿಯಲ್ಲಿ ದ.ಕ.ಜಿಲ್ಲೆಯ 29 ವೈದ್ಯಕೀಯ, ಇಂಜಿನಿಯರಿಂಗ್ ಕಾಲೇಜುಗಳ 900 ಕ್ಕೂ ಅಧಿಕ ವಿದ್ಯಾರ್ಥಿಗಳ ತಪಾಸಣೆ ನಡೆಸಲಾಗಿತ್ತು‌. ಇವರಲ್ಲಿ 630 ಮಂದಿಯಲ್ಲಿ ಪಾಸಿಟಿವ್ ಪತ್ತೆಯಾಗಿದೆ. ಇವರಲ್ಲಿ ಕೇರಳದ 320 ವಿದ್ಯಾರ್ಥಿಗಳಲ್ಲಿ ಪಾಸಿಟಿವ್ ಕಂಡು ಬಂದಿದೆ.

ಹಾಸ್ಟೆಲ್ ಗಳಲ್ಲಿ ವಾಸವಿರುವ ಅನೇಕ ವಿದ್ಯಾರ್ಥಿಗಳಲ್ಲಿ ಸೋಂಕು ತಗುಲಿದ ಮಾಹಿತಿಯಿದ್ದು, ಹಾಸ್ಟೆಲ್ ಗಳ ಸುರಕ್ಷತೆಗೆ ಕ್ರಮ ಕೈಗೊಳ್ಳಲಾಗಿದೆ.

Edited By : Nirmala Aralikatti
Kshetra Samachara

Kshetra Samachara

24/08/2021 09:13 pm

Cinque Terre

11.74 K

Cinque Terre

1

ಸಂಬಂಧಿತ ಸುದ್ದಿ